ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾಪುರ: ಪಂಚ ಗಂಗಾವಳಿ ತಟದಲ್ಲಿ ಸ್ವಚ್ಛತೆ

Last Updated 31 ಜನವರಿ 2023, 4:42 IST
ಅಕ್ಷರ ಗಾತ್ರ

ಕುಂದಾಪುರ: ಪರಿಸರದ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಪರಿಸರ ಕಾಳಜಿ ಮೈಗೂಡಿಸಿಕೊಳ್ಳುವುದರಿಂದ, ಉತ್ತಮ ಆರೋಗ್ಯ ಹಾಗೂ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಅಬ್ದುಲ್ ಹುಸೇನ್ ರಹೀಮ್ ಶೇಖ್ ಹೇಳಿದರು.

ಖಾರ್ವಿಕೇರಿಯ ಪಂಚಗಂಗಾವಳಿ ನದಿ ತಟದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಕುಂದಾಪುರ ವಕೀ ಲರ ಸಂಘ, ಅಭಿಯೋಗ ಇಲಾಖೆ, ತಾಲ್ಲೂಕು ಆಡಳಿತ ಹಾಗೂ ಕುಂದಾಪುರ ಪುರಸಭೆ ಆಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಸೋಮವಾರ ನಡೆದ ಸ್ವಚ್ಛತಾ ಕಾರ್ಯದಲ್ಲಿ ಅವರು ಮಾತನಾಡಿದರು.

ಶುಚಿತ್ವ ದೈವಭಕ್ತಿಯಷ್ಟೇ ಶ್ರೇಷ್ಠ ಎನ್ನುವ ಮಹಾತ್ಮ ಗಾಂಧೀಜಿಯವರ ಆಶಯದಂತೆ ಬದುಕಬೇಕು. ನಮ್ಮನ್ನು ಸಂರಕ್ಷಿಸುವ ಪರಿಸರವನ್ನು ಪ್ರೀತಿಸಿ, ಗೌರವಿಸುವ ಮೂಲಕ ಮುಂದಿನ ಪೀಳಿಗೆಗೂ ಪರಿಸರ ಕಾಳಜಿ ಪಸರಿ ಸಬೇಕು ಎಂದು ಅವರು ಸಲಹೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ರೋಹಿಣಿ ಡಿ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜೆ.ಶ್ರೀನಾಥ್ ರಾವ್, ತಹಶೀಲ್ದಾರ್ ಕಿರಣ್ ಗೌರಯ್ಯ, ಉಪ ತಹಶಿಲ್ದಾರ್ ವಿನಯ್, ಕಂದಾಯ ನಿರೀಕ್ಷಕ ದಿನೇಶ್, ಆಹಾರ ನಿರೀಕ್ಷಕ ಸುರೇಶ್.ಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT