ಶುಕ್ರವಾರ, ಜನವರಿ 22, 2021
19 °C

ಕುಂದಾಪುರ: ಸಮುದ್ರದಲ್ಲಿ ಮುಳಗಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಾಪುರ: ಸಮೀಪದ ಎಂ ಕೋಡಿ ಬೀಚ್‌ಗೆ ಇಳಿದಿದ್ದ ಇಬ್ಬರು ಯುವಕರಲ್ಲಿ ಓರ್ವ ಮೃತಪಟ್ಟು, ಮತ್ತೊರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತರನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗದ ಮಂಜುನಾಥ (33) ಎಂದು ಗುರುತಿಸಲಾಗಿದೆ. ಕುಂದಾಪುರದಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಮಂಜುನಾಥ್‌ ಸೋಮವಾರ ಸ್ನೇಹಿತ ಮಂಜುನಾಥ್‌ ಜತೆಯಲ್ಲಿ ಬೀಚ್‌ಗೆ ಸ್ನಾನ ಮಾಡಲು ಬಂದಿದ್ದರು.

ಇಬ್ಬರೂ ಅಲೆಗಳ ಸೆಳೆತಕ್ಕೆ ಸಿಲುಕಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಒಬ್ಬ ಯುವಕನನ್ನು ರಕ್ಷಣೆ ಮಾಡಿದರು. ಮತ್ತೊಬ್ಬರ ರಕ್ಷಣೆ ಸಾಧ್ಯವಾಗಲಿಲ್ಲ. ಯುವಕನ ಶವವನ್ನು ಕುಂದಾಪುರದ ಶವಾಗಾರದಲ್ಲಿ ಇರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು