ಕುಂದಾಪುರ: ‘ದೇಶದ ಭವಿಷ್ಯವಾದ ಯುವ ಸಮುದಾಯ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು, ಆರೋಗ್ಯಯುತ ಜೀವನಶೈಲಿ ಪಾಲಿಸಿ ಪರಿಶ್ರಮದಿಂದ ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡು ಕೀಳರಿಮೆಯಿಂದ ಹೊರಬಂದು ಬದುಕಿನ ಶಿಲ್ಪಿಗಳಾಗಬೇಕು’ ಎಂದು ಉಡುಪಿ ದೊಡ್ಡನಗುಡ್ಡೆಯ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ ಮನಶಾಸ್ತ್ರಜ್ಞ ಡಾ.ವಿರೂಪಾಕ್ಷ ದೇವರುಮನೆ ಹೇಳಿದರು.

ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2025–26ನೇ ಸಾಲಿನ ವಿದ್ಯಾರ್ಥಿ ವೇದಿಕೆ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ರಾಮರಾಯ ಆಚಾರ್ಯ ಪ್ರತಿಜ್ಞಾವಿಧಿ ಬೋಧಿಸಿದರು. ಐಕ್ಯುಎಸಿ ಸಂಚಾಲಕ, ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕ ನಾಗರಾಜ ಯು. ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ವಿದ್ಯಾ ಮಾರ್ಗದರ್ಶನದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಂಪತ್ ಕುಮಾರ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಭಾಕರ ಖಾರ್ವಿ ಭಾಗವಹಿಸಿದ್ದರು.

ವಿದ್ಯಾರ್ಥಿ ವೇದಿಕೆ ಅಧ್ಯಕ್ಷರಾಗಿ ಸಿ.ವಿ. ಕೃತಿಕ್ (ಅಂತಿಮ ಬಿ.ಕಾಂ.), ಉಪಾಧ್ಯಕ್ಷರಾಗಿ ಪ್ರದೀಪ್ (ತೃತೀಯ ಬಿಸಿಎ), ದುರ್ಗಾಶ್ರೀ (ತೃತೀಯ ಬಿ.ಎಸ್ಸಿ), ಕಾರ್ಯದರ್ಶಿಯಾಗಿ ಪುನೀತ್ (ತೃತೀಯ ಬಿಬಿಎ), ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ (ತೃತೀಯ ಬಿಎ), ಎಂ.ಕಾಂ ಪ್ರತಿನಿಧಿಯಾಗಿ ನಿಶಾ ಆಯ್ಕೆಯಾದರು. ವೈಷ್ಣವಿ ಮತ್ತು ತಂಡದವರು ಪ್ರಾರ್ಥಿಸಿದರು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಸ್ವಾಗತಿಸಿದರು. ವಿದ್ಯಾ ಶೇಟ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.