ಕುಂದಾಪುರ: ಬಸ್ರೂರಿನ ತುಳುವೇಶ್ವರ ದೇವಸ್ಥಾನದಲ್ಲಿ ಮೇ 2ರಿಂದ ನಡೆಯಬೇಕಿದ್ದ ಅಷ್ಟಮಂಗಲ ಪ್ರಶ್ನೆ ಕಾರ್ಯಕ್ರಮವನ್ನು ಜೋತಿಷ್ಯ ಚಿಂತಕರ ಸಲಹೆಯಂತೆ ಮುಂದೂಡಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಚ್.ಕೆ. ದೇವಾನಂದ ಶೆಟ್ಟಿ ತಿಳಿಸಿದ್ದಾರೆ.

ಪ್ರಶ್ನಾ ಚಿಂತನೆಯಲ್ಲಿ ಶ್ರೀಚಕ್ರ ಸಾನಿಧ್ಯ ಹೊಂದಿರುವ ಮೂಲಳ ದೇವಿ ತುಳುವೇಶ್ವರಿ ಸಾನಿಧ್ಯದ ಅಭಿವೃದ್ಧಿ ನಡೆದ ನಂತರವೇ ತುಳುವೇಶ್ವರನ ಸಾನಿಧ್ಯದ ಪೂರ್ಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬ ಸಂದೇಶ ಲಭಿಸಿರುವುದರಿಂದ ಮೊದಲಿಗೆ ತುಳುವೇಶ್ವರಿ ಸಾನಿಧ್ಯದ ಜೀರ್ಣೋದ್ಧಾರ, ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಲಾಗುವುದು. ಅದು ಪೂರ್ಣಗೊಂಡ ಬಳಿಕ ತುಳುವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಕೈಗೊಳ್ಳಬೇಕು. ಭೂದಾನ ಸೇವೆ ಪ್ರಾರಂಭಿಸಿ ತುಳುವೇಶ್ವರನ ಸುತ್ತಮುತ್ತಲಿನ ಭೂಮಿ ಮರಳಿ ಪಡೆಯುವ ಪ್ರಕ್ರಿಯೆ ಮುಂದುವರಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಶ್ನಾಚಿಂತನೆ ಸಂದರ್ಭ ತುಳುವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಸಂಚಾಲಕ ಬೇಳೂರು ದಿನಕರ ಶೆಟ್ಟಿ, ತುಳುವರ್ಲ್ಡ್ ಫೌಂಡೇಷನ್ ನಿರ್ದೇಶಕ ಡಾ.ರಾಜೇಶ್ ಆಳ್ವ, ಕಾರ್ಯದರ್ಶಿ ಹರಿಪ್ರಸಾದ್ ರೈ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-28-1823763063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.