ಕುಂದಾಪುರ: ಬೈಕ್ ಸವಾರ ಡಿಕ್ಕಿಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಶಾಲಾ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ತೆಕ್ಕಟ್ಟೆ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಘಟನೆ ನಡೆದಿದ್ದು, ಶಾಲಾ ವಾಹನದ ಮುಂಭಾಗ ಜಖಂಗೊಂಡು, ಚಾಲಕನ ತಲೆಗೆ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಹನದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಹೆಮ್ಮಾಡಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ವಾಹನವಾಗಿದ್ದು, ಬ್ರಹ್ಮಾವರಕ್ಕೆ ಹೋಗಿ ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.