ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ವಾಲಿಬಾಲ್ ಹಾಗೂ ಕಬಡ್ಡಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ‘ಈ ಮೈದಾನದಲ್ಲಿ ನಿತ್ಯ ಕ್ರೀಡಾಭ್ಯಾಸ ಮಾಡುತ್ತಿರುವ ವಾಲಿಬಾಲ್, ಕಬಡ್ಡಿ ಆಟಗಾರರು, ಕ್ರೀಡಾ ಸಂಘಟನೆಗಳ ಪ್ರಮುಖರ ಒತ್ತಾಯದಂತೆ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಸರ್ವ ಋತುಗಳಲ್ಲಿಯೂ ಕ್ರೀಡಾಭ್ಯಾಸ, ತರಬೇತಿ ಪಡೆಯಲು ಸಹಾಯವಾಗುವಂತೆ ಎರಡು ಕ್ರೀಡಾಂಗಣಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದರು.

ಕ್ರೀಡಾಂಗಣದ ಸ್ವಂತ ನಿಧಿಯಿಂದ ವಾಲಿಬಾಲ್ ಒಳಕ್ರೀಡಾಂಗಣ, ಶಾಸಕರ ನಿಧಿಯಿಂದ ಕಬಡ್ಡಿ ಒಳಕ್ರೀಡಾಂಗಣ ನಿರ್ವಹಿಸಲಾಗುವುದು. ಪ್ರತಿ ಕ್ರೀಡಾಂಗಣವನ್ನು ಅಂದಾಜು ₹13 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವುದು. ಕಬಡ್ಡಿ ಅಂಕಣಕ್ಕೆ ನೆಲ ಹಾಸು ಹಾಕಿ ರಬ್ಬರ್ ಮ್ಯಾಟ್ ಆಟಕ್ಕೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತದೆ. ಕ್ರೀಡಾ ಚಟುವಟಿಕೆಗಳ ಜೊತೆಗೆ ಇತರ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಕಾಮಗಾರಿ ವಿನ್ಯಾಸ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕಬಡ್ಡಿ ಅಮೆಚೂರ್ ಅಸೋಸಿಯೇಷನ್ ಉಪಾಧ್ಯಕ್ಷ ರಾಜೇಶ್ ಕೆ.ಸಿ, ಮಂಗಳೂರು ವಿಶ್ವವಿದ್ಯಾಲಯ ವಾಲಿಬಾಲ್ ತಂಡದ ಮಾಜಿ ನಾಯಕ ರಾಜೇಶ್ ಕಾವೇರಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ ಜಿ. ಬಾಡ, ತಾಲ್ಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ಕುಂದಾಪುರ ಫ್ರೆಂಡ್ಸ್ ವಾಲಿಬಾಲ್ ಕ್ಲಬ್ ಮಾಜಿ ಅಧ್ಯಕ್ಷ ಸುಧೀರ್ ಕೆ.ಎಸ್, ಚಕ್ರವರ್ತಿ ಕ್ರಿಕೆಟರ್ಸ್ನ ಸಾಂಸ್ಕೃತಿಕ ಕಾರ್ಯದರ್ಶಿ ರಾಘವೇಂದ್ರ ಚರಣ್ ನಾವಡ, ಅಖಿಲ ಕರ್ನಾಟಕ ಕೊಂಕಣ ಖಾರ್ವಿ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಪ್ರಕಾಶ್ ಖಾರ್ವಿ, ರಾಷ್ಟ್ರ ಮಟ್ಟದ ಕ್ರೀಡಾಪಟು ಮಹಮ್ಮದ್ ಸಮೀರ್, ನಿರ್ಮಿತಿ ಎಂಜಿನಿಯರ್ ಗಣೇಶ್ ಶೆಟ್ಟಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-28-2036311549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.