ಕುಂದಾಪುರ: ಸಂವಿಧಾನದ ಆಶಯಗಳನ್ನು ಗೌರವಿಸುವ ಜೊತೆಯಲ್ಲಿ ಲೋಕಸಭೆಯ ಪ್ರತಿ ಸದಸ್ಯರ ಹಕ್ಕುಗಳನ್ನು ರಕ್ಷಿಸುವ ಹೊಣೆ ಸ್ಪೀಕರ್ ಅವರದ್ದಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಹೇಳಿದರು.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಂರಕ್ಷಣೆ ಮಾಡುವ ಹೊಣೆಯನ್ನು ಹೊತ್ತವರೇ, ಹೊಣೆಗಾರಿಕೆಯಿಂದ ಜಾರಿಕೊಳ್ಳಬಾರದು ಎಂದರು.

ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಕೆಯಾಗುವಾಗ ಸದಸ್ಯರಿಗೆ ವ್ಯಾಪ್ತಿಯ ನಿರ್ಬಂಧ ಇರುವುದಿಲ್ಲ. ಪ್ರತಿಪಕ್ಷಗಳಿಂದ ಸರ್ಕಾರದ ವಿರುದ್ಧ ಆಕ್ಷೇಪಗಳು ಬಂದಾಗಲೂ, ಉಭಯ ಸದನಗಳ ನಿರ್ವಹಣೆ ಮಾಡುವವರು ಹಾಗೂ ಸಭಾ ನಾಯಕರಲ್ಲಿ ಸಮಚಿತ್ತದ ಭಾವನೆ ಇರಬೇಕು. ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ಜವಾಬ್ದಾರಿಯನ್ನು ಸಭಾ ನಾಯಕರಾದ ಪ್ರಧಾನಿ ಬೇರೆಯವರಿಗೆ ನೀಡಿರುವುದು ಸರಿಯಲ್ಲ. ಸ್ಪೀಕರ್ ಯಾರಿಂದಲೂ ಪ್ರಭಾವಿತರಾಗಿರಬಾರದು ಎಂದು ಹೇಳಿದರು.

ಅಮೆರಿಕಾದ ಅಧ್ಯಕ್ಷ ಟ್ರಂಪ್, ಪದೇ ಪದೇ ನಮ್ಮ ದೇಶದ ಆಂತರಿಕ ವಿಚಾರ ಹಾಗೂ ವಿದೇಶಿ ನೀತಿಗಳಲ್ಲಿ ಹೇಳಿಕೆ ನೀಡುತ್ತಿದ್ದರೂ, ನಮ್ಮ ಪ್ರಧಾನಿ ಮೌನಿಯಾಗಿರುವುದು ಅನೇಕ ಸಂದೇಹಗಳನ್ನು ಹುಟ್ಟು ಹಾಕುತ್ತಿದೆ ಎಂದರು.

ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಪಕ್ಷಾತೀತ ಧೋರಣೆ ಹೊಂದಿರುವ ಸ್ಪೀಕರ್ ನಿರ್ಲಿಪ್ತ ಧೋರಣೆ ಹೊಂದಿರಬೇಕು. ಇತ್ತೀಚಿನ ದಿನಗಳಲ್ಲಿ ಭಾರತದ ವಿದೇಶಿ ನೀತಿಗಳು ಸರಿಯಾಗಿ ಜಾರಿಯಾಗುತ್ತಿಲ್ಲ. ಭಾರತದೊಂದಿಗೆ ಸೌಹಾರ್ದ ಸಂಬಂಧ ಹೊಂದಿದ್ದ ಇರಾನ್ ದೇಶದ ಮುಖ್ಯಸ್ಥನ ಕೊಲೆಯಾದಾಗಲೂ ಕ್ಷಿಪ್ರವಾಗಿ ಪ್ರತಿಕ್ರಿಯಿಸದ ಭಾರತದ ನಿಲುವು ಅನುಮಾನಗಳನ್ನು ಹೆಚ್ಚಿಸುತ್ತಿದೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎಂ.ನಾರಾಯಣ ಸ್ವಾಮಿ ಮಾತನಾಡಿ, ವಿಧಾನಮಂಡಲ ನಡೆಯುವಾಗ ಕ್ಷೇತ್ರದ ಹಾಗೂ ರಾಜ್ಯದ ಸಮಸ್ಯೆಗಳ ಕುರಿತು ಕಾಳಜಿ ವಹಿಸಿ ಪ್ರಶ್ನೆಗಳನ್ನು ಕೇಳುವ ಎಲ್ಲರಿಗೂ ಚುಕ್ಕಿ ಗುರುತಿನಲ್ಲಿ ಮಾತನಾಡುವ ಅವಕಾಶ ದೊರಕುವುದಿಲ್ಲ. ಆದರೆ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡುವ ಸೌಜನ್ಯದ ನಡವಳಿಕೆಯಾಗಬೇಕು ಎನ್ನುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ.ಖಾದರ್ ಸದಸ್ಯರ ಹಿತಾಸಕ್ತಿ ಕಾಪಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.

ಉತ್ತರ ನೀಡದೆ ಇರುವ ಬಗ್ಗೆ ಸಂಬಂಧಿಸಿದ ಸಚಿವರು ಗಮನಹರಿಸಿ, ಅಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು. ಈ ಸದನದ ಕಲಾಪದ ಅವಧಿಯಲ್ಲಿ ಕೇಳಿರುವ ಪ್ರಶ್ನೆಗಳಿಗೆ ಈ ಸದನ ಮುಕ್ತಾಯವಾಗುವ ಮೊದಲೇ ಉತ್ತರ ಒದಗಿಸುವ ಕೆಲಸವಾಗಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಂಕರ್ ಕುಂದರ್, ಹರಿಪ್ರಸಾದ್ ಕಾನ್ಮಕ್ಕಿ, ವಿನೋದ್ ಕ್ರಾಸ್ಟೋ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260318-28-532349640

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.