ಬುಧವಾರ, ಮೇ 18, 2022
27 °C

ಕುರಿಯ ಗಣಪತಿ ಶಾಸ್ತ್ರಿಗಳಿಗೆ ಶ್ರೀ ವಿದ್ಯಾಮಾನ್ಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಯತಿಶ್ರೇಷ್ಠ ವಿದ್ಯಾಮಾನ್ಯತೀರ್ಥ ಶ್ರೀಗಳ ಹೆಸರಿನಲ್ಲಿ ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಶ್ರೀಗಳು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರಕ್ಕೆ ತೆಂಕುತಿಟ್ಟಿನಲ್ಲಿ ಮೂರು ದಶಕಗಳ ಕಾಲ ಭಾಗವತರಾಗಿ, ಅನುಭವಿ ರಂಗ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಕುರಿಯ ಗಣಪತಿ ಶಾಸ್ತ್ರಿಗಳು ಆಯ್ಕೆಯಾಗಿದ್ದಾರೆ.

ಮೇ 11ರಂದು ಬೆಳಿಗ್ಗೆ 11.00 ಗಂಟೆಗೆ ಪಲಿಮಾರಿನಲ್ಲಿ ನಡೆಯುವ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವದಲ್ಲಿ ಕುರಿಯ ಗಣಪತಿ ಶಾಸ್ತ್ರೀಗಳಿಗೆ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಫಲಕ ಹಾಗೂ ₹ 50,000 ನಿಧಿ ಹೊಂದಿರುತ್ತದೆ ಎಂದು ಪಲಿಮಾರು ಮಠದ ದಿವಾನರು ತಿಳಿಸಿದ್ದಾರೆ.

ಕುರಿಯ ಮನೆತನದವರಾದ ಗಣಪತಿ ಶಾಸ್ತ್ರಿಗಳು ಕುರಿಯ ವಿಠಲ ಶಾಸ್ತ್ರಿಗಳ ಶಿಷ್ಯರಾಗಿ ಪ್ರಸಿದ್ಧ ವೇಷಧಾರಿಯಾಗಿದ್ದವರು. ಅಗರಿ ಶ್ರೀನಿವಾಸ ಭಾಗವತರ ಪ್ರೇರಣೆಯೊಂದಿಗೆ ಭಾಗವತಿಕೆ ಕ್ಷೇತ್ರವನ್ನು ಪ್ರವೇಶಿಸಿದವರು.

ಕಟೀಲು ಮೇಳದಲ್ಲಿ ಪ್ರದಾನ ಭಾಗವತರಾಗಿ ಮೂರು ದಶಕಗಳ ವ್ಯವಸಾಯದ ಅವಧಿಯಲ್ಲಿ ನೆಡ್ಲೆ ನರಸಿಂಹ ಭಟ್, ಮರವಂತೆ ನರಸಿಂಹದಾಸ, ಪಡ್ರೆ ಚಂದ್ರು, ಕೇದಗಡಿ ಗುಡ್ಡಪ್ಪ ಗೌಡ, ಮುದುಕುಂಜ ವಾಸುದೇವ ಪ್ರಭು, ಕುಡಾಣ ಗೋಪಾಲ ಭಟ್, ಕೋಡಿ ಕುಷ್ಠ ಗಾಣಿಗ, ಪುಂಡರಿಕಾಕ್ಷ ಉಪಾಧ್ಯಾಯ, ಗೇರುಕಟ್ಟೆ ಗಂಗಯ್ಯ ಶೆಟ್ಟಿ ಮುಂತಾದ ಹಿರಿಯ ಕಲಾವಿದರೊಂದಿಗೆ ಒಡನಾಟದ ಅನುಭವವನ್ನು ಹೊಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.