ಉಡುಪಿ: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ನಗರದ ಜೋಡುಕಟ್ಟೆಯ ಬಳಿ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಅದಕ್ಕೂ ಮೊದಲು ನಗರದ ಕೆಎಸ್ಆರ್ಟಿಸಿ ಹಳೆ ಬಸ್ ನಿಲ್ದಾಣದ ಬಳಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಸಹಬಾಳ್ವೆ ಉಡುಪಿ ಸಂಚಾಲಕ ಕೆ. ಫಣಿರಾಜ್, ಕಳೆದ 12 ವರ್ಷಗಳಿಂದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಎಲ್ಲಾ ಹಕ್ಕುಗಳನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು.

ಬಂಡವಾಳಶಾಹಿಗಳಿಗೆ ಪರವಾದ ಮತ್ತು ಕಾರ್ಮಿಕರಿಗೆ ಮಾರಕವಾದ ನೀತಿಗಳನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ, ಅದನ್ನು ವಿರೋಧಿಸಬೇಕಾದ ಅಗತ್ಯ ಇದೆ ಎಂದು ಹೇಳಿದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಬಡವರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ನಿಲ್ಲಿಸಿದೆ. ಉದ್ಯೋಗ ಖಾತರಿ, ಆಹಾರ ಭದ್ರತೆ, ಮಾಹಿತಿ ಹಕ್ಕು ಕಾಯ್ದೆಯನ್ನು ಶಿಥಿಲಗೊಳಿಸುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.

ಬ್ಯಾಂಕ್ ನೌಕರರ ಸಂಘದ ಮುಖಂಡ ನಾಗೇಶ್ ಮಾತನಾಡಿ, ಕಾರ್ಮಿಕರು ಈ ದೇಶದ ಶಕ್ತಿ ಹಾಗೂ ರೈತರು ದೇಶದ ಬೆನ್ನೆಲುಬಾಗಿದ್ದಾರೆ. ಅವರನ್ನು ಕೇಂದ್ರ ಸರ್ಕಾರವು ತುಳಿಯುತ್ತಿದೆ ಎಂದರು.

ಬ್ಯಾಂಕ್ಗಳ ವಿಲೀನೀಕರಣದಿಂದಾಗಿ ಹಲವು ಬ್ಯಾಂಕ್ ಶಾಖೆಗಳು ಮುಚ್ಚಿವೆ. ಆ ಮೂಲಕ ಮುಂದಿನ ಪೀಳಿಗೆಯ ಉದ್ಯೋಗಾವಕಾಶಗಳನ್ನು ಇಲ್ಲವಾಗಿಸಿದೆ ಎಂದು ಹೇಳಿದರು.

ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್ ಮಾತನಾಡಿ, ಬಂದರು, ಹಡಗುಕಟ್ಟೆಗಳನ್ನು ಖಾಸಗಿ ಕಂಪನಿಗಳಿಗೆ ನೀಡಬಾರದು, ಮೀನುಗಾರಿಕೆಯಲ್ಲಿ ತೊಡಗಿರುವ ಮನೆ, ನಿವೇಶನ ಇಲ್ಲದ ಕುಟುಂಬಗಳಿಗೆ ಕೇರಳ ಮಾದರಿಯಲ್ಲಿ ಉಚಿತ ಮನೆ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀನುಗಾರ ಕಾರ್ಮಿಕರ ಭದ್ರತೆಗೆ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು, ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿ ಮಾಡಬೇಕು, ಅಂಗನವಾಡಿ ನೌಕರರನ್ನು ಕಾಯಂ ಎಂದು ಪರಿಗಣಿಸಬೇಕು ಮತ್ತು ಅವರಿಗೆ ಗ್ರ್ಯಾಚ್ಯುಟಿ ಹಣ ನೀಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ವಿಮೆಯಲ್ಲಿ ವಿದೇಶಿ ನೇರ ಬಂಡವಾಳದ ಮಿತಿಯನ್ನು ಶೇ 100ರಷ್ಟು ಹೆಚ್ಚಳಕ್ಕೆ ಅವಕಾಶ ನೀಡುವ ವಿಮಾ ಕಾನೂನುಗಳು (ತಿದ್ದುಪಡಿ) ಬೇಡವೇ ಬೇಡ ಎಂದು ಹೇಳಿದರು.

ಡಿ.ಎಸ್.ಎಸ್. ಅಂಬೇಡ್ಕರ್ ವಾದ ಮುಖಂಡ ಸುಂದರ್ ಮಾಸ್ಟರ್ , ಮುಖಂಡರಾದ ಕಿರಣ್ ಹೆಗ್ಡೆ, ಶಶಿಧರ ಗೊಲ್ಲ, ಸುಭಾಸ್ ನಾಯಕ್, ಸಂಜೀವ ಬಳ್ಕೂರು, ಶಶಿಕಲಾ, ಭಾರತಿ ಎಸ್., ರತ್ನ, ಉಮೇಶ್ ಕುಂದರ್, ರಮೇಶ್, ನಳಿನಿ ಎಸ್., ರಾಮ ಕಾರ್ಕಡ, ಸರೋಜಾ, ಸಾರಿಕ, ಶಾರದ, ಶರ್ಮಿಳ, ಸೌಮ್ಯ ಉಪಸ್ಥಿತರಿದ್ದರು. ಜೆಸಿಟಿಯು ಉಡುಪಿ ಜಿಲ್ಲಾ ಸಂಚಾಲಕ ಕವಿರಾಜ್. ಎಸ್.ಕಾಂಚನ್ ನಿರೂಪಿಸಿದರು. ಶಿವಾನಂದ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.