ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ಕೇಂದ್ರದಲ್ಲಿ ಶ್ರೇಷ್ಠ ವಿಜ್ಞಾನಿಗಳು ಮೂಡಿಬರಲಿ

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಲಾಲಾಜಿ ಮೆಂಡನ್
Last Updated 1 ಅಕ್ಟೋಬರ್ 2022, 14:17 IST
ಅಕ್ಷರ ಗಾತ್ರ

ಉಡುಪಿ: ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆದು, ಉತ್ತಮ ಮತ್ತು ಶ್ರೇಷ್ಠ ವಿಜ್ಞಾನಿಗಳು ಮೂಡಿ ಬರಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಕಿವಿಮಾತು ಹೇಳಿದರು.

ಅಲೆವೂರಿನ ಪ್ರಗತಿ ನಗರದಲ್ಲಿ ಜಿಲ್ಲಾಡಳಿತ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ₹ 4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಯುಗವು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೂ ಈ ಬಗ್ಗೆ ಅರಿವು ಮೂಡಿಸುವಲ್ಲಿ ವಿಜ್ಞಾನ ಕೇಂದ್ರವು ಸಹಕಾರಿಯಾಗಲಿದೆ. ಮಕ್ಕಳಲ್ಲಿ ಸಂಶೋಧನೆಗಳ ಬಗ್ಗೆ ಆಸಕ್ತಿ ಮೂಡಿಸುವುದರ ಮೂಲಕ ಉತ್ತಮ ವಿಜ್ಞಾನಿಗಳನ್ನಾಗಿ ರೂಪಿಸಲು ಸಾಧ್ಯವಾಗಲಿದೆ ಎಂದರು.

ಈಗಾಗಲೇ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ಗಳ ಮೂಲಕ ವೈಜ್ಞಾನಿಕ ಅರಿವು ಮೂಡಿಸಲಾಗುತ್ತಿದೆ. ವಿಜ್ಞಾನ ಕೇಂದ್ರದ ಮೂಲಕ ಹೆಚ್ಚಿನ ಅರಿವು ವಿದ್ಯಾರ್ಥಿಗಳಿಗೆ ಸಿಗಲಿದೆ. ಬೆಳಪುನಲ್ಲಿ ವಿಜ್ಞಾನ ಸಂಶೋಧನಾ ಕೇಂದ್ರದ ಕಟ್ಟದ ಕಾಮಗಾರಿಯೂ ಶೇ 70 ರಷ್ಟು ಮುಕ್ತಾಯಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ವಿ.ಡಿ. ಮೊಗೇರಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್, ಅಲೆವೂರು ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು. ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT