ಉಡುಪಿ: ಕಾರ್ಕಳದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವುದರ ಜೊತೆಗೆ, ಭೂಮಾಲೀಕರಿಗೆ ಪರಿಹಾರದ ಹಣವನ್ನು ವೈಜ್ಞಾನಿಕವಾಗಿ ಮೌಲ್ಯ ನಿಗದಿಪಡಿಸಿ ನೀಡಬೇಕು ಎಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅಲ್ಲಿನ ಜನರು ಮನೆ, ಕೃಷಿ ಭೂಮಿಯನ್ನು ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೀಡುವ ಅಗತ್ಯ ಉಂಟಾಗಿದೆ. ಅವರಿಗೆ ಪ್ರಸ್ತುತ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಹಾರದ ಹಣ ನೀಡಿದಲ್ಲಿ ಅವರು ಭವಿಷ್ಯದ ಜೀವನ ರೂಪಿಸಿಕೊಳ್ಳಲು ಅನುಕೂಲವಾಗಲಿದೆ. ಅದಕ್ಕೆ ಒತ್ತು ನೀಡಬೇಕು ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಶಾಸಕ ಸುನಿಲ್ ಕುಮಾರ್ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಡಿಎಫ್ಒ ರುಥ್ರೇನ್ ಪಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಸಹಾಯಕ ಆಯುಕ್ತೆ ರಶ್ಮಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಹಶೀಲ್ದಾರರು ಭಾಗವಹಿಸಿದ್ದರು.

ಮಲ್ಪೆ–ಕರಾವಳಿ ಜಂಕ್ಷನ್ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಕಾಮಗಾರಿ ಕೈಗೊಳ್ಳಬೇಕು.
ಕೋಟ ಶ್ರೀನಿವಾಸ ಪೂಜಾರಿ, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.