ಶುಕ್ರವಾರ, ಆಗಸ್ಟ್ 19, 2022
22 °C

ಸರ್ಕಾರಿ ಗೌರವಗಳೊಂದಿಗೆ ಬನ್ನಂಜೆ ಗೋವಿಂದಾಚಾರ್ಯರ ಅಂತ್ಯಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ಅಂತ್ಯಕ್ರಿಯೆ ಭಾನುವಾರ ರಾತ್ರಿ ಅಂಬಲಪಾಡಿಯ ಮನೆಯ ಆವರಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಜಿಲ್ಲಾಧಿಕಾರಿ ಜಿ.ಜಗದೀಶ್‌ ಜಿಲ್ಲಾಡಳಿತದ ಪರವಾಗಿ ಗೌರವ ಸಲ್ಲಿಸಿದರು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸೂಚಿಸಿದರು. ಬಳಿಕ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಹಿರಿಯ ಪುತ್ರ ವಿನಯಭೂಷಣ ಆಚಾರ್ಯ ಅಂತ್ಯಕ್ರಿಯೆ ನೆರವೇರಿಸಿದರು.

ಇದನ್ನೂ ಓದಿ:

ಈ ಸಂದರ್ಭ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕ ರಘುಪತಿ ಭಟ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿ ಜಿ.ಶಂಕರ್‌, ಎಸ್‌ಪಿ ವಿಷ್ಣುವರ್ಧನ್‌, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಇದ್ದರು.

ಇದನ್ನೂ ಓದಿ:

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು