ಭಾನುವಾರ, ಏಪ್ರಿಲ್ 11, 2021
32 °C
ಉಡುಪಿಯಲ್ಲಿ ರಾಜ್ಯ ಮಟ್ಟದ ‘ವಕೀಲರ ಸಾಂಸ್ಕೃತಿಕ ಹಬ್ಬ–ಉತ್ಸವ್‌’ ಸಮಾರಂಭ

ಸಮಗ್ರ ಪ್ರಶಸ್ತಿ ಪಡೆದ ಮಂಗಳೂರು ವಕೀಲರ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಉಡುಪಿ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ‘ವಕೀಲರ ಸಾಂಸ್ಕೃತಿಕ ಹಬ್ಬ–ಉತ್ಸವ್‌’ ಸ್ಪರ್ಧೆಯಲ್ಲಿ ಮಂಗಳೂರಿನ ವಕೀಲರ ಸಂಘ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಸಾಂಸ್ಕೃತಿಕ ಕಾರ್ಯಕ್ರಮಗಳ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಮಂಗಳೂರು ವಕೀಲರ ಸಂಘ ಮೊದಲ ಬಹುಮಾನವಾಗಿ ₹ 30,000 ನಗದು, ಆಕರ್ಷಕ ಟ್ರೋಫಿ ಪಡೆದುಕೊಂಡಿತು. ಬೆಂಗಳೂರು ವಕೀಲರ ಸಂಘ ₹ 20,000 ನಗದು ಪುರಸ್ಕಾರ ಸಹಿತ ಟ್ರೋಫಿಯೊಂದಿಗೆ ದ್ವಿತೀಯ ಸ್ಥಾನ ಪಡೆಯಿತು.

ಕೊಪ್ಪದ ವಕೀಲರ ಸಂಘ ₹ 10,000 ನಗದು ಬಹುಮಾನ ಹಗೂ ಟ್ರೋಪಿಯೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿತು. ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರಾದ ಜೆ.ಎನ್‌.ಸುಬ್ರಹ್ಮಣ್ಯ, ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ನರಹರಿ ಪ್ರಭಾಕರ್ ಮರಾಠೆ, ಬೆಂಗಳೂರು ವಕೀಲರ ಅಸೋಸಿಯೇಷನ್ ಅಧ್ಯಕ್ಷ ರಂಗನಾಥ್‌, ಉದ್ಯಮಿ ಜಿ.ಶಂಕರ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರೆನೋಲ್ಡ್‌ ಪ್ರವೀನ್ ಕುಮಾರ್‌, ನಿತೀಶ್ ಶೆಟ್ಟಿ ಎಕ್ಕಾರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.