ಮೂಲ ವೇತನಕ್ಕೆ ಶೇ. 30 ರಷ್ಟು ಫಿಟ್‌ಮೆಂಟ್ (ತಾರತಮ್ಯ ಸರಿದೂಗಿಸುವ ಮೊತ್ತ) ನೀಡಿ ವೇತನ ಪರಿಷ್ಕರಿಸಲಾಗಿದೆ. ಏಪ್ರಿಲ್ 1 ರಿಂದಲೇ ನೌಕರರು ಪರಿಷ್ಕೃತ ವೇತನ ಪಡೆಯಲಿದ್ದಾರೆ. ಚುನಾವಣೆ ಹೊಸ್ತಿಲಿನಲ್ಲಿ ನಿಂತಿರುವುದರಿಂದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ತುಟ್ಟಿಭತ್ಯೆಯನ್ನು ಮೂಲ ವೇತನದಲ್ಲಿ ವಿಲೀನಗೊಳಿಸಿ, ಕನಿಷ್ಠ ಮೂಲ ವೇತನವನ್ನು ₹17,000 ಕ್ಕೆ ನಿಗದಿ ಮಾಡಲಾಗಿದೆ.