ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಕೊಟ್ಟಿಗೆಯಲ್ಲಿ ಚಿರತೆ: ಆತಂಕ

Last Updated 8 ನವೆಂಬರ್ 2021, 14:01 IST
ಅಕ್ಷರ ಗಾತ್ರ

ಹೆಬ್ರಿ: ತಾಲ್ಲೂಕಿನ ಕುಚ್ಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಬೆಟ್ಟು ದಯಾನಂದ ಭಟ್ ಅವರ ಅಡಿಕೆ ಒಣಗಿಸುವ ಕೊಟ್ಟಿಗೆಯಲ್ಲಿ ಚಿರತೆ ನುಗ್ಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

ಎರಡು ದಿನಗಳಿಂದ ಕೊಟ್ಟಿಗೆಯಲ್ಲಿಯೇ ಬಂಧಿಯಾಗಿರುವ ಚಿರತೆ ಮೈಮೇಲೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳುತ್ತಾರೆ. ಅರಣ್ಯ ಇಲಾಖೆಯಿಂದ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಚಿರತೆಯು ದಯಾನಂದ್ ಭಟ್ ಅವರ ಪತ್ನಿ ಮೇಲೆ ದಾಳಿ ಮಾಡಿತ್ತು. ಈ ವೇಳೆಪರಚಿದ ಗಾಯಗಳಾಗಿದ್ದು ಅವರು ಹೆಬ್ರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಕುಚ್ಚೂರು ಗ್ರಾಮ‌ ಪಂಚಾಯಿತಿ ಸದಸ್ಯ ಮಹೇಶ್ ಶೆಟ್ಟಿ, ಅರಣ್ಯ ಇಲಾಖೆ ಸಿಬ್ಬಂದಿ ಬಂದು ಚಿರತೆ ಸೆರೆಗೆ ಬೋನ್ ಅಳವಡಿಸಿದ್ದಾರೆ.

ಕುಚ್ಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ಚಿರತೆಗಳ ಸಂಚಾರದಿಂದ ಗ್ರಾಮಸ್ಥರು ಭಯಗೊಂಡಿದ್ದು, ಚಿರತೆ ಹಿಡಿದು ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT