ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್.ಜಿ.ಫೌಂಡೇಷನ್‌| ನೇತ್ರ ತಪಾಸಣೆ, ಸನ್ಮಾನ

Last Updated 5 ಫೆಬ್ರುವರಿ 2023, 6:20 IST
ಅಕ್ಷರ ಗಾತ್ರ

ಕುಂದಾಪುರ: ಆರೋಗ್ಯ ಶಿಬಿರಗಳ ಮೂಲಕ ಜನರಲ್ಲಿ ಅರಿವು ಮೂಡಿಸುವ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ನಡೆಸುತ್ತಿರುವುದು ಸುತ್ಯರ್ಹ ಎಂದು ಉಡುಪಿ ಜಿಲ್ಲಾ ಆರೋ ಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಹೇಳಿದರು.

ಎಲ್.ಜಿ.ಫೌಂಡೇಷನ್ ಹಂಗ ಳೂರು-ಕುಂದಾಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೋಟೇಶ್ವರ ಗ್ರಾಮ ಪಂಚಾಯಿತಿ, ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಡಾ.ಪಿ.ದಯಾನಂದ ಪೈ ಮತ್ತು ಡಾ.ಸತೀಶ್ ಪೈ ಚಾರಿಟಬಲ್ ಟ್ರಸ್ಟ್ ಉಡುಪಿ, ದೇವಾಡಿಗ ಅಕ್ಷಯ ಕಿರಣ, ಕುಂದಾಪುರ ಮತ್ತು ಕೋಟೇಶ್ವರ ದೇವಾಡಿಗ ಸಂಘದ ವತಿಯಿಂದ ದಿ.ಸುರೇಶ್ ಡಿ.ಪಡುಕೋಣೆಯವರ ಸ್ಮರ ಣಾರ್ಥ ಅಂಕದಕಟ್ಟೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶುಕುಮಾರ್ ಶೆಟ್ಟಿ, ಸರ್ಕಾರಿ ವೈದ್ಯಾಧಿಕಾರಿಗಳಾದ ಡಾ.ನಾಗಭೂಷಣ, ಡಾ.ನಾಗೇಶ್ ಹಾಗೂ ಡಾ.ಮಧುಕರ್ ಅವರನ್ನು ಸನ್ಮಾನಿಸಲಾಯಿತು.

ಎಲ್.ಜಿ ಫೌಂಡೇಷನ್ ಮ್ಯಾನೇಜಿಂಗ್ ಟ್ರಸ್ಟಿ ನಾಗರಾಜ ಡಿ.ಪಡುಕೋಣೆ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗೇಶ್, ದೇವಾಡಿಗ ಅಕ್ಷಯ ಕಿರಣದ ಪೋಷಕ ಮಧುಕರ ದೇವಾಡಿಗ, ಅಶೋಕ್ ದೇವಾಡಿಗ ಮುಂಬೈ, ಕೋಟೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ಗೊಲ್ಲ, ಕೋಟೇಶ್ವರ ದೇವಾಡಿಗ ಸಂಘದ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಪ್ರಸಾದ ನೇತ್ರಾಲಯದ ವೈದ್ಯೆ ಡಾ.ಅರ್ಚನಾ ಶೆಟ್ಟಿ, ಕೋಟೇಶ್ವರ ಸರ್ಕಾರಿ ಆಸ್ಪತ್ರೆ ವೈದ್ಯೆ ಡಾ ಪೂರ್ಣಿಮಾ,‌ ನಾಗರಾಜ ಡಿ. ಪಡುಕೋಣೆ ಅವರ ಮಾತೃಶ್ರಿ ಲಚ್ಚ ದೇವಾಡಿಗ, ಗುರು ಕೃತೀಕ್, ಬಾಬು ಪಡುಕೋಣೆ ಇದ್ದರು.

ಶ್ರೀಮತಿ ಪ್ರಾರ್ಥಿಸಿದರು. ಕುಂದಾಪುರ ದೇವಾಡಿಗ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಸ್ವಾಗತಿಸಿದರು. ಶಂಕರ ಅಂಕದಕಟ್ಟೆ ಪ್ರಸ್ತಾವಿಕವಾಗಿ ಮಾತನಾಡಿದರು. ಪುರುಷೋತ್ತಮ ದಾಸ್ ವಂದಿಸಿದರು. ರಾಮ ದೇವಾಡಿಗ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT