ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ ಜಿಲ್ಲೆಯಲ್ಲಿ ಲಾಕ್‌ಡೌನ್‌ ಶೀಘ್ರ ನಿರ್ಧಾರ: ಜಿಲ್ಲಾಧಿಕಾರಿ ಜಿ.ಜಗದೀಶ್‌

ಶಾಸಕರ ಜತೆ ಸಭೆ
Last Updated 13 ಜುಲೈ 2020, 13:36 IST
ಅಕ್ಷರ ಗಾತ್ರ

ಉಡುಪಿ:ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡುವ ಬಗ್ಗೆ ಮಂಗಳವಾರ ನಡೆಯಲಿರುವ ಶಾಸಕರ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಸೋಮವಾರ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ‘ರಾಜ್ಯದಲ್ಲಿ ಹೆಚ್ಚು ಕೋವಿಡ್‌ ಪ್ರಕರಣಗಳಿರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳ ಜತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ಪಡೆದಿದ್ದು, ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಅಧಿಕಾರವನ್ನು ಜಿಲ್ಲಾಡಳಿತಕ್ಕೆ ನೀಡಿದ್ದಾರೆ’ ಎಂದರು.

ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುತ್ತಿರುವವರನ್ನು ತಡೆಯಲು ಜಿಲ್ಲೆಯ ಗಡಿಗಳನ್ನು ಬಂದ್ ಮಾಡುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಭೆಯ ಮುಂದಿಡಲಾಯಿತು. ಜನಪ್ರತಿನಿಧಿಗಳ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲು ಸಿಎಂ ಸೂಚನೆ ನೀಡಿದ್ದು, ಮಂಗಳವಾರ ಎಲ್ಲ ಶಾಸಕರ ಸಭೆ ಕರೆಯಲಾಗಿದೆ.

‘ಏಕಾಏಕಿ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ. ಜಿಲ್ಲೆಯಿಂದ ಹೊರ ಹೋಗಲು ಹಾಗೂ ಒಳ ಬರಲು ಅವಕಾಶ ಕೊಟ್ಟು, ಲಾಕ್‌ಡೌನ್ ಅಥವಾ ಸೀಲ್‌ಡೌನ್‌ ಮಾಡಲಾಗುವುದು. ಅಗತ್ಯ ವಸ್ತುಗಳ ಖರೀದಿಗೂ ಒಂದು ದಿನ ಅವಕಾಶ ಕೊಡಲಾಗುವುದು.ಸಾರ್ವಜನಿಕ ಸಾರಿಗೆ ಬೇಕೆ ಬೇಡವೇ ಎಂಬ ಬಗ್ಗೆಯೂ ಮಂಗಳವಾರದ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಮದುವೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನ ಸೇರದಂತೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಆದರೆ, ಕೆಲವು ಸಂಘ ಸಂಸ್ಥೆಗಳು ಸಭೆ ಸಮಾರಂಭ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂಥವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT