ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡುಬಿದ್ರಿ: ಲಾಕ್‌ಡೌನ್ ಸಡಿಲಿಕೆ- ಜನಸಂದಣಿ

Last Updated 8 ಜೂನ್ 2021, 7:19 IST
ಅಕ್ಷರ ಗಾತ್ರ

ಪಡುಬಿದ್ರಿ: ಕಾಪು ತಾಲ್ಲೂಕಿನಲ್ಲಿ 50ಕ್ಕಿಂತ ಅಧಿಕ ಪಾಸಿಟಿವ್ ಪ್ರಕರಣಗಳಿರುವ ಗ್ರಾಮಗಳಲ್ಲಿ ಅಗತ್ಯವಸ್ತು ಖರೀದಿಗೆ ಲಾಕ್‌ಡೌನ್ ಸಡಿಲಿಕೆ ಮಾಡಿದ್ದ ಪರಿಣಾಮ ಸೋಮವಾರ ಎಲ್ಲೆಡೆ ಜನಸಂದಣಿ ಹೆಚ್ಚಾಗಿತ್ತು.

ಕಾಪು ತಾಲ್ಲೂಕಿನ ಬೆಳ್ಳೆ, ಶಿರ್ವ, ಬೆಳಪು ಹಾಗೂ ಪಡುಬಿದ್ರಿ ಗ್ರಾಮಗಳಲ್ಲಿ ಐದು ದಿನಗಳ ಸಂಪೂರ್ಣ ಲಾಕ್‌ಡೌನ್ ಭಾನುವಾರ ಪೂರ್ಣಗೊಂಡಿದೆ. ಜಿಲ್ಲಾಡಳಿತ ಸೋಮವಾರ ಮತ್ತು ಮಂಗಳವಾರ ಅಗತ್ಯ ವಸ್ತುಗಳ ಖರೀದಿಗೆ ಸಡಿಲಿಕೆ ನೀಡಿದ್ದು, ಇದರಿಂದ ಜನರು ಪೇಟೆಗೆ ಬಂದು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಿದರು. ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ಕ್ರಮ ವಹಿಸಲಾಗಿತ್ತು. ಪೊಲೀಸರು ಹಾಗೂ ಕಾರ್ಯಪಡೆ ಸದಸ್ಯರು ಜನರನ್ನು ನಿಯಂತ್ರಿಸುತ್ತಿದ್ದ ದೃಶ್ಯ ಕಂಡುಬಂತು.

ಮಾರ್ಕೆಟ್‌ನಲ್ಲಿರುವ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಿದ್ದು, ಸಂತೆ ವ್ಯಾಪಾರಕ್ಕೆ ಸ್ಥಳೀಯ ಮೈದಾನದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ವಾಹನ ಸಂಚಾರಕ್ಕೂ ದೂರದಲ್ಲಿ ಅವಕಾಶ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT