ಗುರುವಾರ , ಜುಲೈ 29, 2021
21 °C

ಕಾರ್ಕಳದ ರಾಧಾಕೃಷ್ಣ ನಾಯಕ್‌ಗೆ ಬೆಂಬಲ: ಸಿದ್ದರಾಮಯ್ಯ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಉಡುಪಿ: ಫೇಸ್‌ಬುಕ್‌ನಲ್ಲಿ ಸೇನೆಯ ಬಗ್ಗೆ ಅವಹೇಳನಕಾರಿ ಬರಹ ಹಾಕಿರುವ ಕಾರ್ಕಳದ ರಾಧಾಕೃಷ್ಣ ನಾಯಕ್ ಪರ ಬೆಂಬಲಕ್ಕೆ ನಿಂತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಜೆಪಿ ಜಿಲ್ಲಾ ಘಟಕ ಶನಿವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್‌.ವಿಷ್ಣುವರ್ಧನ್‌ ಅವರಿಗೆ ದೂರು ಸಲ್ಲಿಸಿದೆ.

ಜಾಲತಾಣದಲ್ಲಿ ಯೋಧರ ವಿರುದ್ಧವಾಗಿ ಹಾಗೂ ಪಾಕಿಸ್ತಾನದ ಪರವಾಗಿ ಪೋಸ್ಟ್‌ ಹಾಕಿರುವ ರಾಧಾಕೃಷ್ಣ ನಾಯಕ್‌ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರು ರಾಧಾಕೃಷ್ಣನ ಪರವಾಗಿ ಟ್ವಿಟರ್‌ನಲ್ಲಿ ಬೆಂಬಲ ಸೂಚಿಸಿರುವುದು ದೇಶದ್ರೋಹಿಗೆ ಬೆಂಬಲ ನೀಡಿದಂತಾಗಿದೆ. ಈ ಸಂಬಂಧ ದೇಶದ್ರೋಹಕ್ಕೆ ನೆರವು ಹಾಗೂ ಪ್ರಚೋದನೆ ನೀಡಿದ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು