ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣನವರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಅತಿ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು.

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣ, ಮೋಟಾರ್ ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು ಮೊದಲಾದ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ ಎಂದು ಹೇಳಿದರು.

ರಾಜಿ ಸಂಧಾನದ ಮೂಲಕ ಪ್ರಕರಣಗಳು ಇತ್ಯರ್ಥಗೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೊಗೇಶ್ ಪಿ.ಆರ್. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.