‘ಲೋಕಸಭೆ ಚುನಾವಣೆ: ಐವನ್‌ ಡಿಸೋಜಗೆ ಟಿಕೆಟ್‌ ನೀಡಿ‌’

7
ಜಿಲ್ಲಾ ಕ್ರೈಸ್ತ ಒಕ್ಕೂಟದ ಮುಖಂಡ ಒತ್ತಾಯ

‘ಲೋಕಸಭೆ ಚುನಾವಣೆ: ಐವನ್‌ ಡಿಸೋಜಗೆ ಟಿಕೆಟ್‌ ನೀಡಿ‌’

Published:
Updated:
Deccan Herald

ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕ್ರೈಸ್ತ ಸಮುದಾಯದ ಮುಖಂಡ ಐವನ್ ಡಿಸೋಜ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಕ್ರೈಸ್ತ ಒಕ್ಕೂಟದ ಮುಖಂಡರು ಒತ್ತಾಯಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ರಾಜ್ಯದ ಒಟ್ಟು ಜನಸಂಖ್ಯೆಯ ಶೇ 4 ಹಾಗೂ ಜಿಲ್ಲೆಯಲ್ಲಿ ಶೇ 7ರಷ್ಟು ಕ್ರೈಸ್ತ ಸಮುದಾಯದವರು ಇದ್ದಾರೆ. ಹಾಗಾಗಿ, ಲೋಕಸಭಾ ಚುನಾವಣೆಯಲ್ಲಿ ಐವನ್ ಡಿಸೋಜ ಅವರಿಗೆ ಟಿಕೆಟ್‌ ನೀಡಬೇಕು ಎಂದು ಅಂತರರಾಷ್ಟ್ರೀಯ ಕ್ರೈಸ್ತ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಡಾ.ನೇರಿ ಕರ್ನೆಲಿಯೊ ಒತ್ತಾಯಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಕನಿಷ್ಠ 2 ಕ್ಷೇತ್ರ ಹಾಗೂ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದ ಮುಖಂಡರಿಗೆಗೆ ಟಿಕೆಟ್‌ ನೀಡಬೇಕು. ಉಡುಪಿ ಹಾಗೂ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಗೆಲುವಿನಲ್ಲಿ ಅಲ್ಪಸಂಖ್ಯಾತರ ಮತ ನಿರ್ಣಾಯಕ ಪಾತ್ರ ವಹಿಸಲಿದೆ ಎಂದರು.

ಪಕ್ಷ ನೀಡಿದ ಹುದ್ದೆಗಳನ್ನು ಐವನ್ ಡಿಸೋಜ ಸಮರ್ಥವಾಗಿ ನಿಭಾಯಿಸಿದ್ದಾರೆ. ಪಕ್ಷದ ಸಂಘಟನೆಯಲ್ಲೂ ಮುಂಚೂಣಿಯಲ್ಲಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಡವರಿಗೆ ನೆರವು ಕೊಡಿಸಿದ್ದಾರೆ. ಹಲವು ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಅವರಿಗೆ ಟಿಕೆಟ್ ನೀಡಿದರೆ, ಈ ಭಾಗದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ, ಅಲ್ಪಸಂಖ್ಯಾತ ವೇದಿಕೆಯ ಪ್ರಧಾನ ಕಾರ್ಯದರ್ಶಿ ಚಾರ್ಲ್ಸ್ ಅಂಬ್ಲರ್, ಅಂತರಾಷ್ಟ್ರೀಯ ಕ್ರೈಸ್ತ ಸಂಘಗಳ ಉದ್ಯಾವರ ಒಕ್ಕೂಟದ ಕಾರ್ಯದರ್ಶಿ ಸ್ಟೀವನ್ ಕುಲಾಸೊ, ಕೆಥೊಲಿಕ್ ಸಭಾ ಜಿಲ್ಲಾಧ್ಯಕ್ಷ ಆಲ್ವಿನ್ ಕ್ವಾಡ್ರಸ್‌, ಪ್ರಧಾನ ಕಾರ್ಯದರ್ಶಿ ಮ್ಯಾಕ್ಸಿಮ್ ಡಿಸೋಜ, ಕೆಥೊಲಿಕ್‌ ಯುವಜನರ ಸಂಘದ ಜಿಲ್ಲಾಧ್ಯಕ್ಷ ಡಿಯೋನ್ ಡಿಸೋಜ, ವಲೇರಿಯನ್ ಫೆರ್ನಾಂಡಿಸ್, ಜಾನೆಟ್ ಬರ್ಬೋಜ ಅವರು ಉಪಸ್ಥಿತರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !