ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಆ.14ರಂದು ಮೆಗಾ ಲೋಕ್ ಅದಾಲತ್

Last Updated 1 ಜುಲೈ 2021, 15:03 IST
ಅಕ್ಷರ ಗಾತ್ರ

ಉಡುಪಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಆ.14 ರಂದು ಮೆಗಾ ಲೋಕ್ ಅದಾಲತ್‌ ಅಯೋಜಿಸಲಾಗಿದೆ.

ಸಾರ್ವಜನಿಕರು ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳಲು ಮೆಗಾ ಅದಾಲತ್ ವೇದಿಕೆಯಾಗಲಿದ್ದು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಡಿ.ಆರ್ ಪ್ರಕರಣ, ಚೆಕ್‌ ಅಮಾನ್ಯ ಪ್ರಕರಣ, ಬ್ಯಾಂಕ್, ಸಾಲದ ವಸೂಲಾತಿ ಪ್ರಕರಣ, ಮೋಟಾರು–ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಪರಿಹರಿಸಿಕೊಳ್ಳಬಹುದು.

ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕಾರ್ಮಿಕ ವಿವಾದ ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮ್‌ಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ವೈವಾಹಿಕ, ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನ ಹೊರತುಪಡಿಸಿ), ಭೂ-ಸ್ವಾಧೀನ ಪರಿಹಾರ ಪ್ರಕರಣಗಳು, ಭೂ-ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯಗಳಲ್ಲಿ ಎರಡೂ ಕಡೆಯವರಿಗೆ ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ವಿವಾದ ಅಂತ್ಯವಾಗಲಿದೆ. ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅದಾಲತ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ 9480898702 ಸಂಪರ್ಕಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜೆ.ಎನ್. ಸುಬ್ರಮಣ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT