ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಬ್ರಿ ಆಸ್ಪತ್ರೆಗೆ ಲೋಕಾಯುಕ್ತ ಎಸ್‌ಪಿ ಭೇಟಿ

Published 23 ಜೂನ್ 2024, 5:03 IST
Last Updated 23 ಜೂನ್ 2024, 5:03 IST
ಅಕ್ಷರ ಗಾತ್ರ

ಹೆಬ್ರಿ: ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಮಂಗಳೂರು ವಿಭಾಗದ ಲೋಕಾಯುಕ್ತ ಎಸ್‌ಪಿ ನಟರಾಜ್ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಆಮ್ಲಜನಕ ಘಟಕ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಇದನ್ನು ದುರಸ್ತಿಗೊಳಿಸಬೇಕು. ಅಗತ್ಯ ಇರುವ ಮೂಲಸೌಕರ್ಯ ಹಾಗೂ ತಜ್ಞ ವೈದ್ಯರ ನೇಮಕಕ್ಕೆ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಲಾಗಿದೆ ಎಂದು ನಟರಾಜ್ ಹೇಳಿದರು.

ಸಿಬ್ಬಂದಿ ಸಮವಸ್ತ್ರ ಹಾಗೂ ಗುರುತಿನ ಚೀಟಿ ಧರಿಸಲು ತಪ್ಪಿಸಬಾರದು. ಹಾವು, ಹುಚ್ಚುನಾಯಿ ಕಡಿತಕ್ಕೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಆದ್ಯತೆ ನೀಡಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆಸಿ ಸೂಚನೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಪ್ರೇಮಾನಂದ, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಧಿಕಾರಿ ಡಾ. ಸಂತೋಷ್ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್‌ ಕೆಜಿ, ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್ ಮಂಜುನಾಥ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT