ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

27ರಿಂದ ‘ನಲಿ ಕಲಿ’ ಆರಂಭ: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

Published 20 ಮೇ 2024, 22:30 IST
Last Updated 20 ಮೇ 2024, 22:30 IST
ಅಕ್ಷರ ಗಾತ್ರ

ಉಡುಪಿ: ಶಾಲೆಗಳ ಆರಂಭಕ್ಕೆ ಸಿದ್ಧತೆಗಳು ನಡೆಯುತ್ತಿದ್ದು ಪುಸ್ತಕ, ಸಮವಸ್ತ್ರ ಪೂರೈಕೆಯಾಗಲಿವೆ. ಇದೇ 27ರಿಂದ ‘ನಲಿ ಕಲಿ’ ಕಾರ್ಯಕ್ರಮ ಆರಂಭವಾಗಲಿದೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

‘ಕೆಪಿಎಸ್‌ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಮುಂದಿನ ವರ್ಷ 500 ಕೆಪಿಎಸ್‌ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 3,000 ಸರ್ಕಾರಿ ಶಾಲೆಗಳನ್ನು ತೆರೆಯಲಾಗುವುದು. ಕಾರ್ಪೊರೆಟ್‌ ಸಂಸ್ಥೆಗಳ ಸಿಎಸ್‌ಆರ್‌ ನಿಧಿ ಬಳಸಿಕೊಂಡು ಪ್ರಸಕ್ತ ವರ್ಷ 500 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 3 ರಿಂದ ಗರಿಷ್ಠ 6 ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ ಎಂದು ಸಚಿವರು ತಿಳಿಸಿದರು.

ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗ್ರೇಸ್ ಮಾರ್ಕ್ಸ್‌ ಪದ್ಧತಿ ಮುಂಬರುವ ವರ್ಷಗಳಲ್ಲಿ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಉಡುಪಿ: 2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೀಡಲಾಗಿದ್ದ ಶೇ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಪದ್ಧತಿಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸೋಮವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಗ್ರೇಸ್ ಮಾರ್ಕ್ಸ್‌ ಪದ್ಧತಿ ಪ್ರಸಕ್ತ ವರ್ಷ ಮಾತ್ರ ನೀಡಲಾಗಿದ್ದು ಮುಂಬರುವ ವರ್ಷಗಳಲ್ಲಿ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಶಾಲಾ ಆರಂಭಕ್ಕೆ ಸಿದ್ಧತೆಗಳು ನಡೆಯುತ್ತಿದ್ದು ಪುಸ್ತಕ, ಯೂನಿಫಾರಂ ಪೂರೈಕೆಯಾಗಲಿದೆ. ಕೆಪಿಎಸ್‌ ಶಾಲೆಗಳಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷ 500 ಕೆಪಿಎಸ್‌ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 3,000 ಸರ್ಕಾರಿ ಶಾಲೆಗಳನ್ನು ತೆರೆಯಲಾಗುವುದು. ಕಾರ್ಪೊರೇಟ್‌ ಸಂಸ್ಥೆಗಳ ಸಿಎಸ್‌ಆರ್‌ ನಿಧಿ ಬಳಸಿಕೊಂಡು ಪ್ರಸಕ್ತ ವರ್ಷ 500 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 3 ರಿಂದ ಗರಿಷ್ಠ 6 ಶಾಲೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT