ಶನಿವಾರ, ನವೆಂಬರ್ 28, 2020
17 °C

ಸಂಸತ್ ಗ್ರಂಥಾಲಯಕ್ಕೆ ಮಹಾಭಾರತ ಸಮರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮಹಾಭಾರತ ಕೃತಿಯ ಪರಿಷ್ಕೃತ ಆವೃತ್ತಿಯ (ಸಂಸ್ಕೃತ ಭಾಷೆಯ 24 ಸಂಪುಟಗಳು) ಪ್ರತಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಮಂಗಳವಾರ ಸಂಸತ್ತಿನ ಗ್ರಂಥಾಲಯಕ್ಕೆ ಸಮರ್ಪಿಸಿದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ನಿವಾಸದಲ್ಲಿ ಭೇಟಿಮಾಡಿದ ಪೇಜಾವರ ಶ್ರೀಗಳು ಗ್ರಂಥದ ಪ್ರತಿಯನ್ನು ಹಸ್ತಾಂತರಿಸಿದರು. ಬಳಿಕ ಸಚಿವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚಿಸಿದರು.

ಪಲಿಮಾರು ಮಠದ ತತ್ವ ಸಂಶೋಧನಾ ಸಂಸತ್‌ನಿಂದ ಪ್ರಕಟಗೊಂಡು ವಿಶ್ವೇಶತೀರ್ಥ ಶ್ರೀಗಳ ಉಪಸ್ಥಿತಿಯಲ್ಲಿ ಕಳೆದ ಪಲಿಮಾರು ಮಠದ ಪರ್ಯಾಯದ ಅವಧಿಯಲ್ಲಿ ಮಹಾಭಾರತ ಕೃತಿಯು ಕೃಷ್ಣ ಮಠದಲ್ಲಿ ಲೋಕಾರ್ಪಣೆಗೊಂಡಿತ್ತು.

ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ಸಂಯೋಜಿಸಿದ್ದರು. ಪೇಜಾವರ ಮಠದ ವಿಷ್ಣುಮೂರ್ತಿ ಆಚಾರ್ಯ, ಜಿ.ಎ.ಅನಂತ, ಕೃಷ್ಣ ಭಟ್, ಪೇಜಾವರ ಮಠದ ದೆಹಲಿ ಶಾಖೆ ವ್ಯವಸ್ಥಾಪಕ ದೇವಿಪ್ರಸಾದ್ ಭಟ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು