ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ), ಅಕಾಡೆಮಿ ಆಫ್ ಜನರಲ್ ಎಜುಕೇಷನ್ (ಎಜಿಇ), ಮಣಿಪಾಲ ಎಜುಕೇಷನ್ ಮತ್ತು ಮೆಡಿಕಲ್ ಗ್ರೂಪ್ ಬೆಂಗಳೂರು (ಎಂಇಎಂಜಿ), ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ಹಾಗೂ ಡಾ. ಟಿ.ಎಂ.ಎ ಪೈ ಫೌಂಡೇಷನ್ ಸಹಯೋಗದಲ್ಲಿ ಆಯೋಜಿಸಿದ್ದ ಹೊಸ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಶನಿವಾರ ಮಣಿಪಾಲದ ಫಾರ್ಚ್ಯೂನ್ ವ್ಯಾಲಿ ವ್ಯೂನಲ್ಲಿ ನಡೆಯಿತು.

ಸಮಾರಂಭದಲ್ಲಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಕೆನರಾ ಬ್ಯಾಂಕ್ನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಕೆ. ಲಕ್ಷ್ಮೀನಾರಾಯಣನ್, ಯುಎಇಯ ತುಂಬೆ ಗ್ರೂಪ್ನ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದೀನ್, ಚಿತ್ರನಟಿ ವಿನಯಾ ಪ್ರಸಾದ್, ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ.ಡಿ. ವೆಂಕಟೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿ, ‘ನಮ್ಮ ಸಮಾಜವನ್ನು ಶ್ರೀಮಂತಗೊಳಿಸಲು ಅರ್ಥಪೂರ್ಣ ಕೊಡುಗೆಗಳನ್ನು ನೀಡಿದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿ. ಶ್ರೇಷ್ಠತೆಯನ್ನು ಗುರುತಿಸುವುದು ಕೇವಲ ಅಭಿನಂದನೆಯಲ್ಲ, ಬದಲಾಗಿ ಅದು ಸಮಾಜದ ಬೌದ್ಧಿಕ ಮತ್ತು ಸಾಂಸ್ಕೃತಿಕ ಬಲವನ್ನು ಹೆಚ್ಚಿಸುವ ಪ್ರಕ್ರಿಯೆ’ ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ‘ರಾಜ್ಯ ಸರ್ಕಾರ ನನಗೆ ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಮೀಸಲಾತಿ ಸುಧಾರಣೆಗಳ ಜವಾಬ್ದಾರಿಯನ್ನು ನೀಡಿತ್ತು. ಆ ವೇಳೆ ಅನಾಥ ಮಕ್ಕಳನ್ನು ಮೀಸಲಾತಿ ವ್ಯಾಪ್ತಿಗೆ ತರಲು ವರದಿ ಸಲ್ಲಿಸಿದ್ದು ನನ್ನ ಸೇವಾವಧಿಯ ಅತ್ಯಂತ ತೃಪ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆʼ ಎಂದರು.

ಲೆಫ್ಟಿನೆಂಟ್ ಜನರಲ್ ಎಂ.ಡಿ. ವೆಂಕಟೇಶ್ ಮಾತನಾಡಿ, ‘ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆ ಒಬ್ಬ ವ್ಯಕ್ತಿಗೆ ಸೀಮಿತವಾದುದಲ್ಲ, ಇದೊಂದು ಸಾಮೂಹಿಕ ಪ್ರಯತ್ನ. ಬೋಧಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಅವಿರತ ಶ್ರಮದ ಫಲವಿದು’ ಎಂದು ಹೇಳಿದರು.

ಮಾಹೆ ಟ್ರಸ್ಟ್ನ ಅಧ್ಯಕ್ಷ ಡಾ. ರಂಜನ್ ಆರ್. ಪೈ, ಮಾಹೆ ಟ್ರಸ್ಟಿನ ಟ್ರಸ್ಟಿ ವಸಂತಿ ಆರ್. ಪೈ, ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ನ ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್ ಯು. ಪೈ ಮತ್ತು ಮಣಿಪಾಲದ ಡಾ. ಟಿ.ಎಂ.ಎ ಪೈ ಫೌಂಡೇಷನ್ನ ಟ್ರಸ್ಟಿ ಟಿ. ಸಚಿನ್ ಪೈ ಇದ್ದರು.

ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ ವಂದಿಸಿದರು.

ಉಡುಪಿ ಯಾವಾಗಲೂ ಕಲೆ ಮತ್ತು ವಿದ್ಯೆಯ ಸಂಗಮ ಸ್ಥಳವಾಗಿದೆ. ಈ ಪರಂಪರೆಯನ್ನು ಮಾಹೆ ಜಾಗತಿಕ ಮಟ್ಟದಲ್ಲಿ ವಿಸ್ತರಿಸಿದೆ. ಈ ಗೌರವಕ್ಕೆ ನಾನು ಚಿರಋಣಿ

-ವಿನಯಾ ಪ್ರಸಾದ್ ನಟಿ

ಕರಾವಳಿಯ ಜನ ನನ್ನನ್ನು ಪ್ರೀತಿಯಿಂದ ಒಪ್ಪಿಕೊಂಡರು. ಮುಂದೆ ಜರ್ಮನಿ ಮತ್ತು ಲಂಡನ್ನಲ್ಲಿ ಕಾರ್ಯನಿರ್ವಹಿಸಿ ಕೆನರಾ ಬ್ಯಾಂಕ್ನ ಉನ್ನತ ಹುದ್ದೆಗೇರಿದ್ದು ನನ್ನ ಭಾಗ್ಯ

-ಕೆ. ಲಕ್ಷ್ಮೀನಾರಾಯಣನ್ ಕೆನರಾ ಬ್ಯಾಂಕ್ನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ

ಮಾಹೆಯ ಉನ್ನತ ಮೌಲ್ಯಗಳೇ ನನಗೆ ಪ್ರೇರಣೆ. ಶಿಕ್ಷಣ ಮತ್ತು ಚಿಕಿತ್ಸೆಯ ಮೂಲಕ ಸಮಾಜದಲ್ಲಿ ಪರಿವರ್ತನೆ ತರಬಹುದೆಂಬ ದೃಢ ವಿಶ್ವಾಸವೇ ನನ್ನ ಸಂಸ್ಥೆಗಳ ಬೆಳವಣಿಗೆಗೆ ಬುನಾದಿ

-ಡಾ. ತುಂಬೆ ಮೊಯ್ದೀನ್ ಯುಎಇಯ ತುಂಬೆ ಗ್ರೂಪ್ನ ಸಂಸ್ಥಾಪಕ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.