ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಷ ದಸರಾ ಬದಲು ಮಹಿಷೋತ್ಸವ ಇಂದು

ಅನುಮತಿ ನಿರಾಕರಿಸಿ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ
Published 14 ಅಕ್ಟೋಬರ್ 2023, 18:26 IST
Last Updated 14 ಅಕ್ಟೋಬರ್ 2023, 18:26 IST
ಅಕ್ಷರ ಗಾತ್ರ

ಉಡುಪಿ: ನಗರದಲ್ಲಿ ಮಹಿಷ ದಸರಾ ಆಚರಣೆಗೆ ಜಿಲ್ಲಾ ಆಡಳಿತ ಅನುಮತಿ ನಿರಾಕರಿಸಿದೆ. ಜಿಲ್ಲಾ ಆಡಳಿತದ ಈ ಕ್ರಮ ಖಂಡಿಸಿರುವ ಸಂಘಟಕರು, ಇದೇ 15ರಂದು ಮಹಿಷ ಸದರಾ ಬದಲು ಮಹಿಷೋತ್ಸವ ಆಚರಿಸುವುದಾಗಿ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ಮಹಿಷ ದಸರಾ ಪರವಾಗಿ ಅಥವಾ ವಿರುದ್ಧವಾಗಿ ಯಾವುದೇ ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ, ಬ್ಯಾನರ್, ಬಂಟಿಂಗ್ಸ್ ಅಳವಡಿಸುವಂತಿಲ್ಲ. ಮುಂಜಾಗ್ರತಾ ಕ್ರಮವಾಗಿ ಅ.14ರ ಸಂಜೆ 6ರಿಂದ ಹಾಗೂ ಅ.15ರ ಸಂಜೆ 6ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಅವಹೇಳನಕಾರಿ ಘೋಷಣೆ ಕೂಗುವಂತಿಲ್ಲ, ಭಾಷಣ ಮಾಡುವಂತಿಲ್ಲ, ಶಸ್ತ್ರಾಸ್ತ್ರ ಇಟ್ಟುಕೊಂಡು ಓಡಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಸಂವಿಧಾನ ಬಾಹಿರ: ಮೂಲನಿವಾಸಿಗಳ ಸಾಂಸ್ಕೃತಿಕ ಹಬ್ಬವಾದ ಮಹಿಷ ದಸರಾಕ್ಕೆ ಕಾನೂನು ಸುವ್ಯವಸ್ಥೆಯ ನೆಪವೊಡ್ಡಿ ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅ.15ರಂದು ಬೆಳಿಗ್ಗೆ 10.30ಕ್ಕೆ ಆದಿ ಉಡುಪಿಯ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಮಹಿಷೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆ ತಿಳಿಸಿದ್ದಾರೆ.

ಮಹಿಷ ದಸರಾ ಅಂಗವಾಗಿ ಮೆರವಣಿಗೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಒಳಾಂಗಣ ವೇದಿಕೆಯಲ್ಲಿ ಮಾತ್ರ ಮಹಿಷೋತ್ಸವ ಮಾಡಲಾಗುವುದು. ಇದಕ್ಕೆ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT