ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ; ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್

ಎಲ್ಲ ಇಲಾಖೆಗಳು ಕ್ರಿಯಾ ಯೋಜನೆ ರೂಪಿಸಿ
Last Updated 30 ಏಪ್ರಿಲ್ 2022, 14:48 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಮಾದರಿ ಜಿಲ್ಲೆಯನ್ನಾಗಿಸಲು ಸಂಬಂಧಪಟ್ಟ ಇಲಾಖೆಗಳು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ, ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕನ್ಸರ್ನ್‌ ಫಾರ್ ವರ್ಕಿಂಗ್ ಚಿಲ್ಡ್ರನ್ಸ್‌ ಕುಂದಾಪುರ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನ ಮಾಡಲು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಬಾಲ ಕಾರ್ಮಿಕರ ಸಮೀಕ್ಷೆ ನಡೆಯುತ್ತಿದೆ.

ಸಮೀಕ್ಷೆ ವೇಳೆ ಪತ್ತೆಯಾಗುವ ಬಾಲಕಾರ್ಮಿಕರಿಗೆ ಪುನರ್ವಸತಿ, ವಿದ್ಯಾಭ್ಯಾಸ, ರಕ್ಷಣೆ ನೀಡಲು ಸಂಬಂಧಪಟ್ಟ ಎಲ್ಲ ಇಲಾಖೆಗಳು ಕ್ರಿಯಾ ಯೋಜನೆ ರೂಪಿಸಿಕೊಂಡು ಕಾರ್ಯನಿರ್ವಹಿಸಲು ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ಜಿಲ್ಲೆಯ ಎಲ್ಲ ಕೈಗಾರಿಕೋದ್ಯಮಿಗಳಿಗೂ ಈಗಾಗಲೇ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ಬಾಲ ಕಾರ್ಮಿಕರ ನೇಮಕ ಮಾಡಿಕೊಳ್ಳದಂತೆ ಮತ್ತು ಬಾಲಕಾರ್ಮಿಕ ಕಾನೂನನ್ನು ಕಡ್ಡಾಯವಾಗಿ ಪಾಲನೆ ಮಾಡುವ ಕುರಿತು ತಿಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಬಾಲ ಕಾರ್ಮಿಕರ ಸಂಖ್ಯೆಯನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು ತಳಮಟ್ಟದಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.

ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ, ಮಕ್ಕಳ ಹಿನ್ನೆಲೆ, ಪೋಷಕರ ಆರ್ಥಿಕ ಪರಿಸ್ಥಿತಿ ಬಗ್ಗೆ ಮಾಹಿತಿ ಜಿಲ್ಲಾಧಿಕಾರಿ ಮಾಹಿತಿ ಪಡೆದು, ವಿದ್ಯಾಭ್ಯಾಸ ಮುಂದುವರಿಸುವಂತೆ ಹಾಗೂ ಓದಿನಲ್ಲಿ ಮುಂದಿರುವಂತೆ ಮಕ್ಕಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲ ಇಲಾಖೆ ಅಧಿಕಾರಿಗಳು ಮಕ್ಕಳೊಂದಿಗೆ ಬೆರೆತು, ಇಲಾಖೆಯಲ್ಲಿ ಮಕ್ಕಳ ಅಭಿವೃದ್ಧಿಗೆ ಇರುವ ವಿವಿಧ ಯೋಜನೆ ಮತ್ತು ಕಾರ್ಯಕ್ರಮಗಳ ಕುರಿತ ಮಾಹಿತಿ ನೀಡಿ, ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಸ್‌.ಶರ್ಮಿಳಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ವೀಣಾ, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ವಿವಿಧ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT