ಗುರುವಾರ , ಅಕ್ಟೋಬರ್ 24, 2019
21 °C

ಮಾಲಾಡಿ: ಬೋನಿಗೆ ಬಿದ್ದ ಚಿರತೆ

Published:
Updated:
Prajavani

ಕುಂದಾಪುರ: ಇಲ್ಲಿಗೆ ಸಮೀಪದ ತೆಕ್ಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾಲಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪ ಅರಣ್ಯ ಇಲಾಖೆಯರು ಭಾನುವಾರ ಇಟ್ಟಿದ್ದ ಬೋನಿಗೆ ಭಾರಿ ಗಾತ್ರದ ಚಿರತೆ ಬಿದ್ದಿದೆ.

ಶಾಲೆಯ ಪಕ್ಕದ ಅಕೇಶಿಯ ಮತ್ತು ಮಾವಿನ ಮರದ ತೋಪಿನಲ್ಲಿ ಆಗಾಗ್ಗೆ ಚಿರತೆ ಕಾಣಿಸಿಕೂಳ್ಳುತ್ತಿರುವ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳೀಯರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಕಳೆದ ಕೆಲ ದಿನಗಳಿಂದ ಬೋನನ್ನು ಇಟ್ಟು ಚಿರತೆ ಹಿಡಿಯಲು ಬಲೆ ಬೀಸಿದ್ದರು.

ಶನಿವಾರ ರಾತ್ರಿ ಬೋನಿನಲ್ಲಿ ಕಟ್ಟಿದ್ದ ನಾಯಿಯ ವಾಸನೆಯ ಬೆನ್ನು ಹತ್ತಿ ಬಂದ ಚಿರತೆ ಬಾನಿನಲ್ಲಿ ಬಂಧಿಯಾಗಿದೆ. 10 ವರ್ಷ ಪ್ರಾಯದ ಗಂಡು ಚಿರತೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿದೆ. ಮಾಲಾಡಿಯ ಆಸುಪಾಸಿನಲ್ಲಿ ಕಳೆದ ಕೆಲ ವರ್ಷಗಳಿಂದ ಆಗಾಗ್ಗೆ ಚಿರತೆ ಕಾಣಿಸಿಕೊಳ್ಳುತ್ತದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಭಾರಿ ಗಾತ್ರದ ಹೆಣ್ಣು ಚಿರತೆ ಬೋನಿಗೆ ಬಿದ್ದಿತ್ತು. ಇದೆ ಪ್ರದೇಶದ ಸುತ್ತಮುತ್ತ ಈವರೆಗೆ ಒಟ್ಟು ಐದು ಚಿರತೆಗಳನ್ನು ಸೆರೆ ಹಿಡಿಯಲಾಗಿದೆ.

ಅರಣ್ಯ ಇಲಾಖೆಯ ವಲಯ ಸಂರಕ್ಷಣಾಧಿಕಾರಿ ಕಮಲಾ, ಸಹಾಯಕ ಅರಣ್ಯ ಸರಂಕ್ಷಣಾಧಿಕಾರಿ ಲೋಹಿತ್, ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಉಪ ವಲಯ ಅರಣ್ಯಾಧಿಕಾರಿ ಉದಯ, ಮಾಲತಿ ಹಾಗೂ ಮಂಜು ಕಾರ್ಯಾಚರಣೆಯಲ್ಲಿ ಇದ್ದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಶೇಖರ ಕಾಂಚನ್‌, ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಗ್ರಾಮ ಪಂಚಾಯತಿ ಸದಸ್ಯರಾದ ವಿಜಯ ಭಂಡಾರಿ, ಸಂಜೀವ ದೇವಾಡಿಗ, ಸತೀಶ್‌ ದೇವಾಡಿಗ ಇದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)