ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನ, ಸೋಮೇಶ್ವರ ವನ್ಯಜೀವಿ ಅಭಯಾರಣ್ಯ, ಪುಷ್ಪಗಿರಿ ವನ್ಯಧಾಮ ಹಾಗೂ ಮೀಸಲು ಅರಣ್ಯ ವ್ಯಾಪ್ತಿಯಲ್ಲಿರುವ ಹಾಡಿಗಳಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಕನಿಷ್ಠ ಮೂಲ ಸೌಕರ್ಯ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಮಲೆಕುಡಿಯ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಕಳದಲ್ಲಿ ಮನವಿ ಸಲ್ಲಿಸಲಾಯಿತು.

ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಸ್ವಇಚ್ಛೆಯಿಂದ ಹೊರ ಬರುವ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಸಲ್ಲಿಸಿದ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದೂ ಮನವಿಯಲ್ಲಿ ಆಗ್ರಹಿಸಲಾಗಿದೆ.

ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಸರ್ಕಾರವೇ ಉತ್ಪನ್ನಗಳನ್ನು ಖರೀದಿ ಮಾಡಬೇಕು ಎಂದೂ ಒತ್ತಾಯಿಸಿದ್ದಾರೆ.

ಅತಿ ಸೂಕ್ಷ್ಮ ಬುಡಕಟ್ಟು ಜನಾಂಗವಾದ ಮಲೆಕುಡಿಯ ಜನಾಂಗದ ಸರ್ವಾಂಗೀಣ ಅಭಿವೃದ್ಧಿಗಾಗಿ ₹7 ಕೋಟಿ ಅನುದಾನ ಒದಗಿಸಬೇಕು ಎಂದೂ ಮನವಿಯಲ್ಲಿ ಆಗ್ರಹಿಸಲಾಗಿದೆ.

ಮಲೆಕುಡಿಯ ಸಂಘದ ನಿಯೋಗದಲ್ಲಿ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು, ಜಿಲ್ಲಾಧ್ಯಕ್ಷ ಗಂಗಾಧರ ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ನೋಣಯ್ಯ ರೆಂಜಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.