ಶುಕ್ರವಾರ, ಅಕ್ಟೋಬರ್ 22, 2021
29 °C

ಮಲ್ಪೆ ಬೀಚ್‌ನಲ್ಲಿ ಮುಳುಗಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಲ್ಪೆ ಬೀಚ್‌ನಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ತುಮಕೂರಿನ ಪಿಎಚ್‌ ಕಾಲೊನಿಯ ಅತ್ತರ್ (23) ಮೃತಪಟ್ಟಿದ್ದಾರೆ.

ಅತ್ತರ್ ತನ್ನ ಸ್ನೇಹಿತರಾದ ಸಲ್ಮಾನ್, ಇಲಿಯಾಸ್, ಸಾಧಿಕ್, ಸಲೀಂ ಹಾಗೂ ಅರ್ಬಾಸ್‌ ಜತೆಗೂಡಿ ಮಂಗಳವಾರ ಮಲ್ಪೆ ಬೀಚ್‌ಗೆ ಪ್ರವಾಸಕ್ಕೆ ಬಂದು ಎಲ್ಲರೂ ಸಮುದ್ರಕ್ಕಿಳಿದಿದ್ದರು. ಅಲೆಗಳ ಅಬ್ಬರಕ್ಕೆ ಸಿಲುಕಿ ಸಲ್ಮಾನ್, ಅರ್ಬಾಸ್ ಹಾಗೂ ಅತ್ತರ್‌ ಮುಳುಗುತ್ತಿದ್ದಾಗ ಟೂರಿಸ್ಟ್‌ ಬೋಟ್‌ನವರು ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಅತ್ತರ್ ರಕ್ಷಣೆ ಸಾಧ್ಯವಾಗಿರಲಿಲ್ಲ. ಕೆಲ ಹೊತ್ತಿನ ಬಳಿಕ ಅತ್ತರ್ ಶವ ಸಮುದ್ರದಲ್ಲಿ ಪತ್ತೆಯಾಗಿದೆ. ಮಲ್ಪೆ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.