ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಪೆ ಬಂದರು ಹೂಳೆತ್ತಲು ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿಗೆ ಮನವಿ

ಬೇಡಿಕೆ ಈಡೇರಿಕೆಗೆ ಮೀನುಗಾರರ ನಿಯೋಗ
Last Updated 4 ಫೆಬ್ರುವರಿ 2021, 16:26 IST
ಅಕ್ಷರ ಗಾತ್ರ

ಉಡುಪಿ: ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳು ಹಾಗೂ ಮೀನುಗಾರ ಮುಖಂಡರ ನಿಯೋಗದೊಂದಿಗೆ ಶಾಸಕ ಕೆ.ರಘುಪತಿ ಭಟ್ ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮೀನುಗಾರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಿದರು.‌

ಯಾಂತ್ರಿಕೃತ ಮೀನುಗಾರಿಕಾ ದೋಣಿಗಳಿಗೆ ಮಾರಾಟ ತೆರಿಗೆ ರಹಿತ ಡೀಸೆಲ್ ಅನ್ನು ಡೆಲಿವರಿ ಪಾಯಿಂಟ್‌ನಲ್ಲಿ ವಿತರಿಸುವುದು. ಟೆಗ್ಮಾ ಶಿಫ್ ಯಾರ್ಡ್ ಗುತ್ತಿಗೆ ಅವಧಿ ವಿಸ್ತರಿಸಬಾರದು, ಬಂದರಿನ ಹೂಳೆತ್ತುವ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಯಿತು.

ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಜೆಟ್‌ನಲ್ಲಿ ಮನವಿಯನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರರ ಫೆಡರೇಶನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ, ಮೀನುಗಾರರ ಮುಖಂಡರಾದ ಸತೀಶ್ ಕುಂದರ್, ದಯಾನಂದ ಸುವರ್ಣ, ವಿಠಲ ಕರ್ಕೇರ, ಕರುಣಾಕರ ಸಾಲ್ಯಾನ್, ನಾಗರಾಜ ಸುವರ್ಣ, ಸುಭಾಷ್ ಮೆಂಡನ್, ಕಿಶೋರ್ ಸುವರ್ಣ, ಮಹೇಶ್ ಸುವರ್ಣ, ನಾರಾಯಣ ಕರ್ಕೇರ, ರವಿರಾಜ್ ಸುವರ್ಣ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT