ಪರಾರಿಯಾಗಿದ್ದ ಆರೋಪಿ ಸಿಕ್ಕಿಬಿದ್ದ

ಮಂಗಳವಾರ, ಏಪ್ರಿಲ್ 23, 2019
27 °C
ಹಿರಿಯಡಕ ಸಮೀಪ ಸಿಕ್ಕಿಬಿದ್ದ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿ ಹನುಮಂತಪ್ಪ

ಪರಾರಿಯಾಗಿದ್ದ ಆರೋಪಿ ಸಿಕ್ಕಿಬಿದ್ದ

Published:
Updated:
Prajavani

ಉಡುಪಿ: ಭಾನುವಾರ ಹಿರಿಯಡಕ ಜೈಲಿಗೆ ಕರೆದೊಯ್ಯುವಾಗ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಹನುಮಂತಪ್ಪನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಹಿರಿಯಡಕ ಸಮೀಪದ ಪೆರ್ಣಂಕಿಲ ಸಮೀಪ ಸೋಮವಾರ ಸಂಜೆ ಹನುಮಂತಪ್ಪ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಹಿರಿಯಡಕ ಜೈಲಿಗೆ ತಳ್ಳಿದ್ದಾರೆ.

ಆರೋಪಿಯ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಹಿರಿಯಡಕ ಸಮೀಪದ ಹೋಟೆಲ್‌ವೊಂದರಲ್ಲಿ ಆರೋಪಿ ಟೀ ಕುಡಿದ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೆರ್ಣಂಕಿಲ ಸುತ್ತಮುತ್ತ ಕಾರ್ಯಾಚರಣೆ ನಡೆಸಿ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌

ಆರೋಪಿ ಹನುಮಂತಪ್ಪ ಮಾರ್ಚ್ 15ರಂದು ಮಣಿಪಾಲದ ಮೂಡುಸಗ್ರಿ ಸಮೀಪದ ನಿರ್ಜನ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ. ಮಾರ್ಚ್‌ 30ರಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ. ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ಸಂದರ್ಭ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಬಳಿಕ ಆರೋಪಿಯನ್ನು ಪೊಲೀಸ್ ವಾಹನದಲ್ಲಿ ಹಿರಿಯಡಕ ಜೈಲಿಗೆ ಕರೆದೊಯ್ಯುವಾಗ ಪೊಲೀಸರ ಕಣ್ತಪ್ಪಿಸಿ ವಾಹನದಿಂದ ಜಿಗಿದು ತಪ್ಪಿಸಿಕೊಂಡು ಪರಾರಿಯಾಗಿದ್ದ. ಈ ಘಟನೆ ನಡೆದು 24 ತಾಸಿನ ಒಳಗೆ ಆರೋಪಿಯನ್ನು ಬಂಧಿಸಲಾಗಿದೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !