ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀದುರ್ಗಾ ಸೌಧ ಉದ್ಘಾಟನೆ 6ಕ್ಕೆ

ಮಂದಾರ್ತಿ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ
Last Updated 3 ನವೆಂಬರ್ 2022, 6:10 IST
ಅಕ್ಷರ ಗಾತ್ರ

ಮಂದಾರ್ತಿ (ಬ್ರಹ್ಮಾವರ): ಕಳೆದ 98 ವರ್ಷಗಳಿಂದ ಸಹಕಾರಿ ಕ್ಷೇತ್ರದ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತ ಸರ್ಕಾರದ ಸವಲತ್ತುಗಳನ್ನು ಸಂಘದ ಸದಸ್ಯರಿಗೆ ತಲುಪಿಸುತ್ತಿರುವ ಮಂದಾರ್ತಿ ಸೇವಾ ಸಹಕಾರಿ ಸಂಘದ ಸಂಪೂರ್ಣ ಹವಾನಿಯಂತ್ರಿತ ನೂತನ ಕಚೇರಿ ‘ಶ್ರೀದುರ್ಗಾ ಸಹಕಾರ ಸೌಧ’ ಕಟ್ಟಡದ ಉದ್ಘಾಟನಾ ಸಮಾರಂಭ ನ.6ರಂದು ನಡೆಯಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ನೂತನ ಕಟ್ಟಡ, ನವೋದಯ ಸ್ವಸಹಾಯ ಗುಂಪು ಮತ್ತು ಜಂಟಿ ಬಾಧ್ಯತಾ ಗುಂಪುಗಳನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯ ಅಧ್ಯಕ್ಷ ಎಂ.ಎನ್‌.ರಾಜೇಂದ್ರ ಕುಮಾರ್ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಎಚ್‌.ಗಂಗಾಧರ ಶೆಟ್ಟಿ ಅಧ್ಯಕ್ಷತೆ ವಹಿಸುವರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗೋದಾಮು, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ ಪ್ರಧಾನ ಕಚೇರಿ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಾಖಾ ಕಚೇರಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನೂತನ ಸಭಾಭವನ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ ಭದ್ರತಾ ಕೊಠಡಿ, ಮಂದಾರ್ತಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಎಚ್‌.ಧನಂಜಯ ಶೆಟ್ಟಿ ಭದ್ರತಾ ಕೋಶ ಉದ್ಘಾಟಿಸುವರು. ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್‌ ಶೆಟ್ಟಿ ಬೆಳಪು, ಹಿರಿಯಡಕ ರೈತರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ‌ ಕುಮಾರ್‌ ಶೆಟ್ಟಿ ಬೆಳ್ಳಂಪಳ್ಳಿ, ಇನ್ನಂಜೆ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ರಾಜೇಶ ರಾವ್‌, ನಬಾರ್ಡ್‌ನ ಎ.ಜಿ.ಎಂ ಸಂಗೀತಾ ಎಸ್‌ ಕರ್ತಾ, ಹೆಗ್ಗುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಬಿ ಶೆಟ್ಟಿ, ಕಾಡೂರಿನ ಪಾಂಡುರಂಗ ಶೆಟ್ಟಿ, ಬಿಲ್ಲಾಡಿಯ ರತ್ನಾ, ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಲಕ್ಷ್ಮೀನಾರಾಯಣ ಎನ್‌, ಲೆಕ್ಕಪರಿಶೋಧನಾ ಉಪನಿರ್ದೇಶಕ ಗಣೇಶ್‌ ಮಯ್ಯ ಉಪಸ್ಥಿತರಿರುವರು.

ಸಂಘದ ಅಧ್ಯಕ್ಷ ಎಚ್.ಗಂಗಾಧರ ಶೆಟ್ಟಿ, ಉಪಾಧ್ಯಕ್ಷ ಕೆ.ಶಂಭುಶಂಕರ ರಾವ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಮರಕಾಲ, ನಿರ್ದೇಶಕರಾದ ಎಚ್.ವಿಠಲ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಗುರುಪ್ರಸಾದ್, ಬಸವ ಮರಾಠಿ, ಪ್ರವೀಣ ಕುಮಾರ್ ಶೆಟ್ಟಿ, ಬೇಬಿ ಪೂಜಾರಿ, ಪ್ರೇಮಾ, ರಾಧಾ, ಕೆ. ರಾಜರಾಮ್ ಶೆಟ್ಟಿ, ನಿತ್ಯನಿಧಿ ಸಂಗ್ರಾಹಕರು ಹಾಜರಿರುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT