ಬ್ರಹ್ಮಾವರ: ಮೊಗವೀರ ಸಮುದಾಯದ ಮುಖಂಡ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಜಿ. ಶಂಕರ್ ಪರಿಕಲ್ಪನೆಯಲ್ಲಿ 16ನೇ ಉಚಿತ ಸರಳ ಸಾಮೂಹಿಕ ವಿವಾಹ ಇಲ್ಲಿನ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಸೋಮವಾರ ಗೋಧೂಳಿ ಮುಹೂರ್ತದಲ್ಲಿ ನೆರವೇರಿತು.

ಉಡುಪಿ ಅಂಬಲಪಾಡಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಜಿಲ್ಲಾ ಮೊಗವೀರ ಯುವ ಸಂಘಟನೆ ಆಶ್ರಯದಲ್ಲಿ ಉಳ್ಳಾಲದ ಮಾರುತಿ ಜನಸೇವಾ ಸಂಘ, ಮಾರುತಿ ಯುವಕ ಸಂಘ ಸಹಯೋಗದಲ್ಲಿ ಪುರೋಹಿತರ ವೇದಮಂತ್ರಗಳೊಂದಿಗೆ, ಕುಟುಂಬಸ್ಥರು, ಮೊಗವೀರ ಬಂಧುಮಿತ್ರರ ಶುಭಹಾರೈಕೆಗಳೊಂದಿಗೆ 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಜಿ. ಶಂಕರ್, ಪತ್ನಿ ಶಾಲಿನಿ ಶಂಕರ್ ನವ ವಧು– ವರರಿಗೆ ಮಾಂಗಲ್ಯ ವಿತರಿಸಿ ಶುಭ ಹಾರೈಸಿದರು. ‘ಸಾಮೂಹಿಕ ವಿವಾಹದಲ್ಲಿ ಮದುವೆಯಾದ ಜೋಡಿಗಳು ಸಮಾಜಕ್ಕೆ ಮಾದರಿಯಾಗಬೇಕು. ಹೊಂದಾಣಿಕೆಯಿಂದ ಸಂಸಾರ ನಡೆಸಬೇಕು. ನಿಮ್ಮ ಸುಖ– ಕಷ್ಟದಲ್ಲಿ ಸಂಘಟನೆ ಸದಾ ಇರುತ್ತದೆ ಎಂದರು.

ಪುರೋಹಿತ ಪ್ರಸಾದ ಐತಾಳ ವಿವಾಹ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯಂತ ಅಮೀನ್ ಕೋಡಿ, ಕಾರ್ಯದರ್ಶಿ ರವೀಂದ್ರ ಪುತ್ರನ್, ಬಾರ್ಕೂರು ಸಂಯುಕ್ತ ಸಭಾ ಅಧ್ಯಕ್ಷ ಸತೀಶ ಅಮೀನ್, ಬಗ್ವಾಡಿ ಹೋಬಳಿ ಶಾಖಾ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಶ್ಯಾಮಿಲಿ ನವೀನ್, ಶಂಕರ ಸಾಲಿಯಾನ್, ಉದ್ಯಮಿ ಹರಿಯಪ್ಪ ಕೋಟ್ಯಾನ್, ಶಿವ ಟಿ. ಅಮೀನ್, ಗಣೇಶ ಪ್ರಸಾದ್ ಕಾಂಚನ್ ಶಿರಿಯಾರ, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ರಾಜೇಂದ್ರ ಹಿರಿಯಡ್ಕ, ವಿನಯ ಕರ್ಕೇರ, ಗಣೇಶ ಕಾಂಚನ್, ಸತೀಶ ಎಂ. ನಾಯಕ್, ಸದಾನಂದ ಬಳ್ಕೂರು, ಸಂಜೀವ ಎಂ.ಎಸ್, ಮಾರುತಿ ಜನಸೇವಾ ಸಂಘದ ಅಧ್ಯಕ್ಷ ಸಂದೀಪ್ ಅಮೀನ್, ಗೌರವಾಧ್ಯಕ್ಷ ವರದರಾಜ್ ಭಾಗವಹಿಸಿದ್ದರು. ಮಾಜಿ ಅಧ್ಯಕ್ಷ ಶಿವರಾಮ ಕೆ.ಎಂ. ಕೋಟ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.