ಉಡುಪಿ: ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಗಸ್ಟ್ 1ರಿಂದ ಸೆಪ್ಟೆಂಬರ್ 17ರವರೆಗೆ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವಕ್ಕೆ ಇದೇ 25ರಂದು ಸಂಜೆ 4.30ಕ್ಕೆ ಮಠದ ರಾಜಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಚಾಲನೆ ನೀಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಸ್ವಾಮೀಜಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಅದಮಾರು ಮಠದ ವಿಶ್ವಪ್ರಿಯತೀರ್ಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಮೊದಲಾದವರು ಪಾಲ್ಗೊಳ್ಳುವರು ಎಂದರು.

ಆ. 15ರಂದು ಚಾಂದ್ರ ಶ್ರೀಕೃಷ್ಣ ಜನ್ಮಾಷ್ಟಮಿ, ಸೆ. 14ರಂದು ಸೌರ ಶ್ರೀಕೃಷ್ಣ ಜನ್ಮಾಷ್ಟಮಿ, 15ರಂದು ಶ್ರೀಕೃಷ್ಣ ಲೀಲೋತ್ಸವ ನಡೆಯಲಿದೆ. ಮಂಡಲೋತ್ಸವದ ಅಂಗವಾಗಿ ಸೆ. 14ರಂದು ನಡೆಯುವ ಕಾರ್ಯಕ್ರಮದಲ್ಲಿ ತಮಿಳುನಾಡಿನ ರಾಜ್ಯಪಾಲ ಆರ್.ಎನ್. ರವಿ ಪಾಲ್ಗೊಳ್ಳುವರು. ಕೃಷ್ಣಾಷ್ಟಮಿ ಅಂಗವಾಗಿ ಕೃಷ್ಣನಿಗೆ ಇಷ್ಟವಾದ ಉಡುಗೊರೆಗಳನ್ನು ಭಕ್ತರು ಸಮರ್ಪಿಸಬಹುದು ಎಂದು ವಿವರಿಸಿದರು.

45 ದಿನಗಳ ಕಾಲ ನಡೆಯಲಿರುವ ಮಂಡಲೋತ್ಸವದ ಅಂಗವಾಗಿ ಧ್ಯಾನ ಮಂಡಲೋತ್ಸವ, ಕೊಳಲು ಮಂಡಲೋತ್ಸವ, ಭಜನಾ ಮಂಡಲೋತ್ಸವ, ಸ್ಪರ್ಧಾ ಹಾಗೂ ಸಾಂಸ್ಕೃತಿಕ ಮಂಡಲೋತ್ಸವ ನಡೆಯಲಿದೆ. ನಾಟಕ, ಯಕ್ಷಗಾನ, ಭರತನಾಟ್ಯ, ಕ್ರೀಡಾ ಸ್ಪರ್ಧೆಗಳು, ಕೋಟಿ ಶ್ರೀಕೃಷ್ಣಮಂತ್ರ ಜಪ ಅಭಿಯಾನ ಜರುಗಲಿವೆ ಎಂದು ಹೇಳಿದರು.

ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಸುಶ್ರೀಂದ್ರತೀರ್ಥ ಸ್ವಾಮೀಜಿ, ಮಠದ ದಿವಾನ ನಾಗರಾಜ ಆಚಾರ್ಯ, ಮಠದ ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.