ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧರ್ಮಗುರು ವಲೇರಿಯನ್ ಮೆಂಡೊನ್ಸಾ ನಿಧನ

Published 4 ಜುಲೈ 2024, 5:36 IST
Last Updated 4 ಜುಲೈ 2024, 5:36 IST
ಅಕ್ಷರ ಗಾತ್ರ

ಉಡುಪಿ: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ಧರ್ಮಗುರು ವಲೇರಿಯನ್ ಮೆಂಡೋನ್ಸಾ (75) ಅವರು ಹೃದಯಾಘಾತದಿಂದ ನಗರದ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. 

ಅವರು ರೋಮ್‌ನ ಅರ್ಬನ್ ವಿಶ್ವವಿದ್ಯಾಲಯದಿಂದ ಬಿ.ಟೆಕ್‌ ಜೊತೆಗೆ ಇಂಗ್ಲಿಷ್‌ನಲ್ಲಿ ಎಂ.ಎ ಮತ್ತು ಮೀಡಿಯಾ ಸಂವಹನದಲ್ಲಿ ಡಿಪ್ಲೊಮಾವನ್ನು ಪಡೆದಿದ್ದರು.

ಜೆಪ್ಪುವಿನ ಸೇಂಟ್ ಆಂಟೋನಿ ಆಶ್ರಮದ ಸಹಾಯಕ ನಿರ್ದೇಶಕ, ವಾಮಂಜೂರಿನಲ್ಲಿ ಸಹಾಯಕ ಧರ್ಮಗುರು, ಮಂಗಳೂರಿನ ಕೆನರಾ ಕಮ್ಯುನಿಕೇಶನ್ ಕೇಂದ್ರದ ಕಾರ್ಯದರ್ಶಿಯಾಗಿ, ಮಂಗಳೂರಿನ ಮಿಲಾಗ್ರಿಸ್‌ ಕಾಲೇಜಿನಲ್ಲಿ ಉಪಪ್ರಾಂಶುಪಾಲ ಹಾಗೂ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT