ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಹ್ಮಾವರ: ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Last Updated 22 ಸೆಪ್ಟೆಂಬರ್ 2022, 15:34 IST
ಅಕ್ಷರ ಗಾತ್ರ

ಕೋಟ (ಬ್ರಹ್ಮಾವರ): ಕೋಟತಟ್ಟು ಬಾರಿಕೆರೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಕೋಟ ಸಮುದ್ಯತಾ ಸಭಾಂಗಣದಲ್ಲಿ ಈಚೆಗೆ ನಡೆಯಿತು. ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಸುರೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು.

ಕೋಟತಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಾಸು ಪೂಜಾರಿ, ಪಂಚಾಯಿತಿ ಸದಸ್ಯೆ ಸರಸ್ವತಿ ಪೂಜಾರಿ ಇದ್ದರು.

ಹೈನುಗಾರರ ಕುಟುಂಬ ದವರಾಗಿದ್ದು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಅಧ್ಯಕ್ಷರು ವೈಯಕ್ತಿಕವಾಗಿ ಪ್ರೋತ್ಸಾಹ ಧನ ವಿತರಿಸಿದರು.

ದಕ್ಷಿಣ ಕನ್ನಡ ಹಾಲು ಉತ್ಪಾದಕರ ವಿಸ್ತರಣಾಧಿಕಾರಿ ಸರಸ್ವತಿ ಅವರು ಹೈನುಗಾರಿಕೆ ಮತ್ತು ಅದರಿಂದ ಹೇಗೆ ಲಾಭ ಪಡೆಯಬಹುದು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಸಂಘಕ್ಕೆ ಅತಿಹೆಚ್ಚು ಹಾಲು ತಂದುಕೊಟ್ಟ ಹಸೀನಾ ಬಾನು,
ಸುರೇಶ್ ಬಾಯರಿ ಮತ್ತು ಆನಂದ ಪೂಜಾರಿ ಅವರಿಗೆ ಬಹುಮಾನ ನೀಡಲಾಯಿತು. ಕಾರ್ಯ ದರ್ಶಿ ಸತೀಶ್ ಕುಂದರ್ ಸ್ವಾಗತಿಸಿದರು. ಶೋಭಾ ಕುಂದರ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT