ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಷರಭರಿತ ಜನಾಂಗ ಸರ್ಕಾರದ ಗುರಿ: ಬಸವರಾಜ ಬೊಮ್ಮಾಯಿ

ಬಾಲಕಿಯರ ವಸತಿ ನಿಲಯ ಉದ್ಘಾಟಿಸಿದ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ
Last Updated 28 ಜೂನ್ 2021, 13:35 IST
ಅಕ್ಷರ ಗಾತ್ರ

ಕಾರ್ಕಳ: ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬಂದು ವಿದ್ಯಾರ್ಜನೆ ಮಾಡುವ ಸಂದರ್ಭದಲ್ಲಿ ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಿಸುವುದು ಅಗತ್ಯ. ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ವಸತಿ ನಿಲಯ ನಿರ್ಮಾಣ ಮಾಡುತ್ತಿದೆ. ಅಕ್ಷರ ಭರಿತ ಮುಂದಿನ ಜನಾಂಗ ನಿರ್ಮಿಸುವುದು ಸರ್ಕಾರದ ಗುರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

₹ 2 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಮಕ್ಕಳು ಶಿಕ್ಷಿತರಾದರೆ ದೇಶ ಅಭಿವೃದ್ಧಿಗೊಂಡಂತೆ. ಹೆಣ್ಣು ಕುಟುಂಬದ ತಾಯಿ, ಮಗಳು, ಪೋಷಕಿ, ಗುರುವೂ ಎಲ್ಲವೂ ಆಗಿದ್ದಾಳೆ. ಸಮಾಜದ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಹಿರಿದು ಎಂದರು.

ವಿಜ್ಞಾನ, ಗಣಿತ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಮುಂದಿನ ಜನಾಂಗ ಅಕ್ಷರಭರಿತವಾಗಿ ರೂಪಿತವಾಗಬೇಕು. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಮಕ್ಕಳು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ‘ತಾಲ್ಲೂಕಿನಲ್ಲಿ ಹಳೆಯ ಕಟ್ಟಡಗಳನ್ನು ಸುಸಜ್ಜಿತಗೊಳಿಸಿ ಹೊಸ ಸ್ಪರ್ಶ ನೀಡುವ ಕೆಲಸ ಮೂರು ವರ್ಷಗಳಿಂದ ನಡೆದಿದೆ’ ಎಂದರು.

ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಸ್ಪಿ ಎನ್. ವಿಷ್ಣುವರ್ಧನ್, ನಕ್ಸಲ್ ವಿಭಾಗದ ಅಧಿಕಾರಿ ನಿಖಿಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಪುರಸಭೆಯ ಅಧ್ಯಕ್ಷೆ ಸುಮಾ ಕೇಶವ್, ತಹಶೀಲ್ದಾರ್ ಪುರಂದರ ಹೆಗ್ಡೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರ್, ಜಿಲ್ಲಾ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಯೋಜನಾ ಎಂಜಿನಿಯರ್ ಪವನ್, ನಿಲಯ ಮೇಲ್ವಿಚಾರಕಿ ಎಚ್.ಎನ್. ನಾಗಶ್ರೀ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ವಿಜಯ ಕುಮಾರ್ ಸ್ವಾಗತಿಸಿದರು. ನವೀನ್ ನಾಯಕ್ ನಿರೂಪಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT