ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಸಚಿವ ಶಿವರಾಜ್ ತಂಗಡಗಿ ಭೇಟಿ

Published 24 ಜನವರಿ 2024, 13:40 IST
Last Updated 24 ಜನವರಿ 2024, 13:40 IST
ಅಕ್ಷರ ಗಾತ್ರ

ಕಾಪು (ಪಡುಬಿದ್ರಿ): ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ, ಕಾಮಗಾರಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅವರು ಮಾರಿಯಮ್ಮನ ದರ್ಶನ ಪಡೆದರು. ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅಮ್ಮನ ಅನುಗ್ರಹ ಪ್ರಸಾದ ನೀಡಿ, ಗೌರವಿಸಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಾಪು ಮಾರಿಯಮ್ಮ ಸಾಂಸ್ಕೃತಿಕ ಭವನಕ್ಕೆ ಅನುದಾನ ಒದಗಿಸಬೇಕೆಂದು ಮನವಿ ನೀಡಿದರು. ನಂತರ ನಿರ್ಮಾಣ ಕಾರ್ಯಗಳ ಬಗ್ಗೆ ವಿವರಿಸಿದರು.

ಕಾರ್ಯಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ‘ದಕ್ಷ ಸಚಿವರಾದ ಶಿವರಾಜ್ ತಂಗಡಗಿ ಅವರಿಂದ ಒಂದಷ್ಟು ನಿರೀಕ್ಷೆಯಿದೆ, ಕಾಪು ಕ್ಷೇತ್ರದ ಶಾಸಕನಾಗಿ ಅವರಿಗೆ ಈ ಕೆಲಸವನ್ನ ಇನ್ನೊಮ್ಮೆ ನೆನಪು ಮಾಡುತ್ತೇನೆ’ ಎಂದು ಹೇಳಿದರು.

ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಉಪಾಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ ಶೆಟ್ಟಿ ಬಾಲಾಜಿ ಮಾತನಾಡಿದರು.

ಸಚಿವರ ಆಪ್ತರಾದ ವೀರೇಂದ್ರ ಪಾಟೀಲ್, ಆಪ್ತ ಕಾರ್ಯದರ್ಶಿ ಮಧುಸೂದನ್ ರೆಡ್ಡಿ, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಕಾಪು ತಹಶೀಲ್ದಾರ್ ಪ್ರತಿಭಾ ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ಪೂರ್ಣಿಮಾ, ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಅನಿಲ್ ಬಲ್ಲಾಳ್ ಕಾಪು ಬೀಡು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಸಮಿತಿಯ ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷ ಮಾಧವ ಆರ್ ಪಾಲನ್, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕಾಪು ಕೊಲ್ಯ, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಎಂ ಸುವರ್ಣ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಚಂದ್ರಶೇಖರ್ ಅಮೀನ್, ರವೀಂದ್ರ ಎಂ, ಬಾಬು ಮಲ್ಲಾರ್, ಕಚೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಸುನಿಲ್ ಎಸ್ ಪೂಜಾರಿ, ಪ್ರಚಾರ ಸಮಿತಿಯ ಸಂಚಾಲಕ ಜಯರಾಮ್ ಆಚಾರ್ಯ, ಪ್ರಭಾತ್ ಶೆಟ್ಟಿ ಮೂಳೂರು, ಪ್ರಚಾರ ಸಮಿತಿಯ ಮಹಿಳಾ ಸಮಿತಿಯ ಮುಖ್ಯ ಸಂಚಾಲಕಿ ಸಾವಿತ್ರಿ ಗಣೇಶ್, ಆರ್ಥಿಕ ಸಮಿತಿಯ ಉಪಸಮಿತಿಯ ಸಂಚಾಲಕರಾದ ಶಿವಣ್ಣ ಎಸ್ ಅಂಚನ್, ಶ್ರೀಧರ ಕಾಂಚನ್, ಕೆ. ಕೊರಗ ಬೆಳಪು, ಜಗ್ಗು ಮಲ್ಲಾರ್, ದೇವರಾಜ್ ಕೋಟ್ಯಾನ್, ಅಶ್ವಿನಿ ಕೋಟ್ಯಾನ್, ರಾಧಾರಮಣ ಶಾಸ್ತ್ರೀ, ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಇದ್ದರು.

ನನ್ನ ಹುಟ್ಟೂರಿನ ಇಳಕಲ್ ಶಿಲೆ

ನನ್ನ ಹುಟ್ಟೂರಿನ ಗ್ರಾನೈಟ್ ಇಳಕಲ್‌ ಶಿಲೆಯನ್ನು ಇಲ್ಲಿ ಬಳಕೆ ಮಾಡಿರುವುದು ನನಗೆ ಸಂತೋಷವಾಗಿದೆ. ಸಮಿತಿಯವರು ಬಹಳ ಶ್ರಮಪಟ್ಟು ಕೆಲಸ ಮಾಡ್ತಾ ಇದ್ದಾರೆ ನಿಜವಾಗಲೂ ಮೆಚ್ಚುವಂತದ್ದು ಎಂದು ಹೇಳಿದ ಸಚಿವರು ಈ ಕ್ಷೇತ್ರವನ್ನು ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಕ್ಷೇತ್ರವನ್ನಾಗಿ ಮಾಡಲು ಇಲಾಖೆಯಿಂದ ಸಹಕಾರಿ ನೀಡಲಾಗುವುದು ಎಂದು ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT