ಮಂಗಳವಾರ, ಡಿಸೆಂಬರ್ 1, 2020
19 °C

'ಮಲ್ಪೆ ತೀರದಲ್ಲಿ ಕೃಷ್ಣನ ಬೃಹತ್ ಮೂರ್ತಿ ಪ್ರತಿಷ್ಠಾಪಿಸಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಮಲ್ಪೆಯ ಕಡಲ ತೀರದಲ್ಲಿ 800 ವರ್ಷಗಳ ಹಿಂದೆ ಆಚಾರ್ಯ ಮಧ್ವರಿಗೆ ಗೋಪಿಚಂದನದೊಳಗೆ ಕಡೆಗೋಲು ಕೃಷ್ಣನ ಮೂರ್ತಿ ಸಿಕ್ಕ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ಕೃಷ್ಣನ ಬೃಹತ್ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಶೀಘ್ರ ಆರಂಭವಾಗಬೇಕು ಎಂದು ಅಷ್ಠಮಠಾಧೀಶರು ಸಚಿವ ಈಶ್ವರಪ್ಪ ಅವರಿಗೆ ತಿಳಿಸಿದರು.

ಗುರುವಾರ ಕೃಷ್ಣಮಠಕ್ಕೆ ಸಚಿವ ಈಶ್ವರಪ್ಪ ಭೇಟಿನೀಡಿದ ಸಂದರ್ಭ ‘ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಗುದ್ದಲಿ ಪೂಜೆ ನಡೆದು ಹಲವು ವರ್ಷಗಳು ಕಳೆದಿವೆ ಆದರೆ, ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು’ ಸಚಿವರಿಗೆ ಮಠಾಧೀಶರು ಹೇಳಿದರು. 

ಕಾಮಗಾರಿ ಅಡಚಣೆಗಳನ್ನು ಸರಿಪಡಿಸಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಪ್ರಯತ್ನಿಸುವುದಾಗಿ ಸಚಿವರು ಸ್ವಾಮೀಜಿಗಳಿಗೆ ಭರವಸೆ ನೀಡಿದರು. ಈ ಸಂದರ್ಭ ಸಚಿವ ಈಶ್ವರಪ್ಪ ಅವರಿಗೆ ಸ್ವಾಮೀಜಿಗಳು ಶಾಲುಹೊದಿಸಿ, ಸನ್ಮಾನ ಮಾಡಿ, ಸ್ಮರಣಿಕೆ ನೀಡಿದರು.

ಈ ಸಂದರ್ಭ ಅದಮಾರು ಮಠದ ವಿಶ್ವಪ್ರಿಯತೀರ್ಥರು, ಈಶಪ್ರಿಯ ತೀರ್ಥರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥರು, ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು, ಸೋದೆ ಮಠದ ವಿಶ್ವವಲ್ಲಭ ತೀರ್ಥರು, ಪಲಿಮಾರು ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥರು ಇದ್ದರು.

ಶುಕ್ರವಾರ ಬೃಹತ್, ಮಧ್ಯಮ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್‌ ಶೆಟ್ಟರ್‌ ಕೃಷ್ಣಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದು,  ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು