ಗುರುವಾರ , ಅಕ್ಟೋಬರ್ 29, 2020
26 °C

ಬೈಂದೂರು: ಸಮುದ್ರ ತೀರದಲ್ಲಿ ಪತ್ತೆಯಾಯ್ತು ಕ್ಷಿಪಣಿ ಮಾದರಿಯ ಉಪಕರಣ, ಏನಿದು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Missile like objective

ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ.

ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು ಕಂಡು ಸ್ಥಳೀಯರು ಕರಾವಳಿ ಕಾವಲು ಪಡೆಗೆ ಸುದ್ದಿ ಮುಟ್ಟಿಸಿದರು. ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಸಿಬ್ಬಂದಿ ವಸ್ತುವನ್ನು ವಶಕ್ಕೆ ತೆಗೆದುಕೊಂಡರು.

ಈ ಕುರಿತು 'ಪ್ರಜಾವಾಣಿ'ಗೆ ಮಾಹಿತಿ ನೀಡಿದ ಕರಾವಳಿ ಕಾವಲುಪಡೆಯ ಎಸ್‌ಪಿ ಆರ್.ಚೇತನ್, 'ಮೇಲ್ನೋಟಕ್ಕೆ ಹಡಗಿನ ದಿಕ್ಕು ಸೂಚಕ ವಸ್ತುವಿನಂತೆ ಕಾಣುತ್ತಿದೆ. ಸಾಮಾನ್ಯವಾಗಿ ಬಂದರಿನ ಸಮೀಪದಲ್ಲಿ ಇಂತಹ ಉಪಕರಣವನ್ನು ಅಳವಡಿಸಲಾಗುತ್ತದೆ. ಹಡಗುಗಳು ಬಂದರು ತಲುಪಲು ಈ ಉಪಕರಣಗಳು ಸಹಾಯ ಮಾಡುತ್ತವೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು