ಉಡುಪಿ: ಕರ್ನಾಟಕ ಸಂಘ ಶಿವಮೊಗ್ಗ ನೀಡುವ ‘ಎಂ. ಕೆ. ಇಂದಿರಾ’ ಪುಸ್ತಕ ಪ್ರಶಸ್ತಿಗೆ ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಇರವಿನ ಅರಿವು’ ವಿಮರ್ಶಾ ಕೃತಿಯು ಪಾತ್ರವಾಗಿದೆ.
ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ. ಇದೇ 22ರಂದು ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.