ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಕ್ಷಗಾನ ಕಲಾವಿದ ಎಂ.ಕೆ.ರಮೇಶ ಆಚಾರ್ಯರಿಗೆ ಅಭಿನಂದನೆ 2 ರಂದು

Last Updated 30 ಸೆಪ್ಟೆಂಬರ್ 2021, 13:10 IST
ಅಕ್ಷರ ಗಾತ್ರ

ಉಡುಪಿ: ತೆಂಕು ಹಾಗೂ ಬಡಗು ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ಕೆ.ರಮೇಶ ಆಚಾರ್ಯ ಅವರಿಗೆ ಸಾರ್ವಜನಿಕ ಅಭಿನಂದನೆ, ಗ್ರಂಥ-ನಿಧಿ ಸಮರ್ಪಣೆ ಸಮಾರಂಭ ಅ.2ರಂದು ಮಧ್ಯಾಹ್ನ 4.30ಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ, ಅನೆಗುಂದಿ ಮಹಾಸಂಸ್ಥಾನದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಉಪಸ್ಥಿತರಿರಲಿದ್ದು, ನಿವೃತ್ತ ಐಎಎಸ್‌ ಅಧಿಕಾರಿ ಶ್ಯಾಮ್ ಭಟ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಹೊರನಾಡು ಕ್ಷೇತ್ರದ ಧರ್ಮಕರ್ತ ಭೀಮೇಶ್ವರ ಜೋಷಿ ಅಭಿನಂದನಾ ಗ್ರಂಥ ‘ಯಕ್ಷಾಂಗನೆ’ ಬಿಡುಗಡೆ ಮಾಡಲಿದ್ದಾರೆ. ಗೃಹಸಚಿವ ಆರಗ ಜ್ಞಾನೇಂದ್ರ, ಕಡಂದಲೆ ಸುರೇಶ್ ಭಂಡಾರಿ, ಉದ್ಯಮಿ ಶ್ರೀಧರ ವಿ.ಆಚಾರ್ಯ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಜಿ.ಟಿ.ಆಚಾರ್ಯ, ಪದಾಧಿಕಾರಿಗಳಾದ ಜನಾರ್ದನ ಆಚಾರ್ಯ ಕಾಪು, ವಿಜಯಕುಮಾರ್ ಮುದ್ರಾಡಿ, ಗಣೇಶ್ ಕುಮಾರ್, ‌ಗಣೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT