ಶಿರ್ವ: ಆರೋಗ್ಯ ಮತ್ತು ಶಿಕ್ಷಣ ಇಂದಿನ ಮೂಲಭೂತ ಅಗತ್ಯವಾಗಿದ್ದು, ಪ್ರತಿಯೊಬ್ಬರಿಗೂ ಕೈಗೆಟುವಂತಿರಬೇಕು. ನಿಟ್ಟೆ ವಿವಿ ಕುಲಾಧಿಪತಿ ವಿನಯ ಹೆಗ್ಡೆ ಅವರ ಸಾಮಾಜಿಕ ಕಾಳಜಿಯಿಂದಾಗಿ ಅವರ ಸಂಸ್ಥೆಗಳು ಎರಡೂ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆ ನೀಡುತ್ತಿವೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಶಿರ್ವದ ವಿದ್ಯಾವರ್ಧಕ ಕ್ಯಾಂಪಸ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಟ್ಟೆ ವಿಶ್ವವಿದ್ಯಾಲಯದ ಜಸ್ಟಿಸ್ ಕೆ.ಎಸ್.ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ವಿವಿ ನಿವೃತ್ತ ಕುಲಪತಿ ಡಾ.ಸತೀಶ್ ಕುಮಾರ್ ಭಂಡಾರಿ ಮಾತನಾಡಿ, ನಾಲ್ಕು ಜಿಲ್ಲೆಗಳಲ್ಲಿ ನಿಟ್ಟೆ ವಿವಿಯ 23 ಗ್ರಾಮೀಣ ಆರೋಗ್ಯ ಕೇಂದ್ರಗಳು ಕಾರ್ಯಾಚರಿಸುತ್ತಿದ್ದು, ತಿಂಗಳಿಗೆ ಎರಡು ಲಕ್ಷಕ್ಕೂ ಅಧಿಕ ಜನರಿಗೆ ಸೇವೆ ನೀಡುತ್ತಿವೆ. ಮೇಲ್ದರ್ಜೆಯ ಪ್ರಯೋಗಾಲಯಗಳ ಮೂಲಕ ಇಸಿಜಿ, ಟೆಲಿ ಕಾರ್ಡಿಯಾಲಜಿ ವ್ಯವಸ್ಥೆಯನ್ನು ಹೊಂದಿವೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ಭಾಸ್ಕರ್ ಶೆಟ್ಟಿ ಮಾತನಾಡಿ, ವಿನಯ್ ಹೆಗ್ಡೆ ಅವರ ಸಾಮಾಜಿಕ ಕಾಳಜಿಯ ಭಾಗವಾಗಿ ನಮ್ಮ ಸಂಸ್ಥೆಯ ಕ್ಯಾಂಪಸ್ನಲ್ಲಿ ವರ್ಷದ ಹಿಂದೆ ಆರಂಭವಾದದ ಕೇಂದ್ರದಲ್ಲಿ ಎಪ್ಪತ್ತರಿಂದ ಎಂಬತ್ತು ಜನ ಪ್ರತಿ ದಿನ ಸೇವೆ ಪಡೆದುಕೊಳ್ಳುತ್ತಿದ್ದಾರೆ. ತಿಂಗಳಿಗೆ ₹90 ಸಾವಿರಕ್ಕೂ ಅಧಿಕ ಮೌಲ್ಯದ ಔಷಧಿ ಉಚಿತವಾಗಿ ನೀಡುತ್ತಿದೆ ಎಂದರು.

ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಉದ್ಘಾಟಿಸಿ ಶುಭ ಹಾರೈಸಿದರು. ಶಿರ್ವ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಿ. ಸುಬ್ಬಯ್ಯ ಹೆಗ್ಡೆ, ಸದಸ್ಯರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಗದೀಶ್ ಅರಸ, ಡಾ.ಎ. ರವೀಂದ್ರನಾಥ್ ಶೆಟ್ಟಿ, ನಿಟ್ಟೆ ಗ್ರಾಮೀಣ ಆರೋಗ್ಯ ಕೇಂದ್ರಗಳ ಸಂಯೋಜಕ ಮೇಜರ್ ಡಾ.ರಾಘವೇಂದ್ರ ಹುಚ್ಚಪ್ಪನವರ್, ನಿಟ್ಟೆ ಡೆಂಟಲ್ ವಿಭಾಗ ಮುಖ್ಯಸ್ಥೆ ಡಾ.ಆಡ್ರಿ ಡಿಕ್ರೂಜ್, ಶಿರ್ವ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಸಜ್ಞಾ ಶೆಟ್ಟಿ, ಡಾ.ನಿವೇದಿತಾ, ಶಿರ್ವ ಹಿಂದೂ ಜೂನಿಯರ್ ಕಾಲೇಜು ಹಳೆವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಕಿಶೋರ್ ಶೆಟ್ಟಿ, ಸಚ್ಚಿದಾನಂದ ಹೆಗ್ಡೆ, ಪ್ರಸಾದ್ ಶೆಟ್ಟಿ ಕುತ್ಯಾರು, ನವೀನ್ ಶೆಟ್ಟಿ ಕುತ್ಯಾರು, ರಮಾನಂದ ಶೆಟ್ಟಿಗಾರ್, ಶಿರ್ವ ಬಂಟರ ಸಂಘದ ವೀರೇಂದ್ರ ಶೆಟ್ಟಿ, ವಿಶ್ವಬ್ರಾಹ್ಮಣ ಸಂಘದ ಅಧ್ಯಕ್ಷ ಉಮೇಶ ಆಚಾರ್ಯ, ಮಹಿಳಾ ಮಂಡಲ, ರೋಟರಿ ಮತ್ತು ಲಯನ್ಸ್ ಸಂಸ್ಥೆಯ ಸದಸ್ಯರು, ನಿಟ್ಟೆ ವಿವಿ ಅಧಿಕಾರಿಗಳು, ಆರೋಗ್ಯ ಕೇಂದ್ರ ಸಿಬ್ಬಂದಿ, ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ಇದ್ದರು. ಆರೋಗ್ಯ ಕೇಂದ್ರದ ವಿದ್ಯಾ ಸ್ವಾಗತಿಸಿದರು. ಡೆಂಟಲ್ ಟೆಕ್ನೀಷಿಯನ್ ಜ್ಯೋತಿಲಕ್ಷ್ಮೀ ವಂದಿಸಿದರು. ಉಪನ್ಯಾಸಕಿ ಸುಪ್ರಿತಾ ಶೆಟ್ಟಿ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.