ಶನಿವಾರ, ಡಿಸೆಂಬರ್ 5, 2020
19 °C

ಸಹಕಾರಿಗಳು ಒಟ್ಟಾಗಿ ಸಹಕಾರ ಕ್ಷೇತ್ರ ಬಲಪಡಿಸಿ: ಶಾಸಕ ಕೆ.ರಘುಪತಿ ಭಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕೋವಿಡ್‌ನಿಂದಾಗಿ ಎಲ್ಲ ಕ್ಷೇತ್ರಗಳಿಗೂ ಸಂಕಷ್ಟ ಎದುರಾಗಿದ್ದು, ಸಹಕಾರಿಗಳು ಒಟ್ಟಾಗಿ ಸಹಕಾರಿ ಕ್ಷೇತ್ರವನ್ನು ಬಲಗೊಳಿಸಬೇಕಿದೆ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಕೆನರಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಪರ್ಕಳ ಶ್ರೀದುರ್ಗಾಪರಮೇಶ್ವರಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಶನಿವಾರ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ಪ್ರವಾಸೋದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಮೇಲೆತ್ತಲು ಸರ್ಕಾರ ಆದ್ಯತೆ ನೀಡುತ್ತಿದೆ. ಕೆಲವೇ ವರ್ಷಗಳಲ್ಲಿ ಭಾರತ ಆರ್ಥಿಕತೆಯಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿಯ ಟಿಎಂಎ ಪೈ ಆಸ್ಪತ್ರೆಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಹಾಗೂ ಉಡುಪಿ ತಾಲ್ಲೂಕು ಆರೋಗ್ಯಾಧಿಕಾರಿ ನಾಗರತ್ನ ಅವರನ್ನು ಸನ್ಮಾನಿಸಲಾಯಿತು. ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕ ಎಂ.ಎಚ್.ವಿಠ್ಠಲ ಸೇರಿಗಾರ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಇದ್ದರು.

ಕೆನರಾ ಸೊಸೈಟಿ ಅಧ್ಯಕ್ಷ ಯು.ಮೋಹನ್ ಉಪಾಧ್ಯ ಸ್ವಾಗತಿಸಿದರು. ಶ್ರೀದುರ್ಗಾಪರಮೇಶ್ವರಿ ಸೊಸೈಟಿಯ ಸಿಇಒ ನಿತ್ಯಾನಂದ ಪರ್ಕಳ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು