ಭಾನುವಾರ, ಆಗಸ್ಟ್ 14, 2022
28 °C

ಸರಳಬೆಟ್ಟು ವಸತಿ ಸಮುಚ್ಚಯ ಕಾಮಗಾರಿ ಪರಿಶೀಲಿಸಿದ ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ವಸತಿ ಸಮುಚ್ಛಯ ಸ್ಥಳಕ್ಕೆ ಶನಿವಾರ ಶಾಸಕ ಕೆ.ರಘುಪತಿ ಭಟ್‌ ಅಧಿಕಾರಿಗಳೊಂದಿಗೆ ಭೇಟಿನೀಡಿ ಪರಿಶೀಲಿಸಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಉಡುಪಿಯ ಸರಳೆಬೆಟ್ಟುವಿನಲ್ಲಿ 460 ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ಮನೆ ಪಡೆಯಲು ಅರ್ಜಿ ಸಲ್ಲಿಸಿ ಹಣ ಪಾವತಿಸಿರುವ ಅರ್ಹ 240 ಫಲಾನುಭವಿಗಳಿಗೆ ಜೂನ್‌ 21ರಂದು ಲಾಟರಿ ಎತ್ತುವ ಮೂಲಕ ಮನೆ ಹಂಚಿಕೆ ಮಾಡಲಾಗುವುದು.

ಉಡುಪಿ ನಗರಸಭೆಯ ಪೌರಾಯುಕ್ತ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮೋಹನ್ ರಾಜ್, ಸಮುದಾಯ ಸಂಘಟನಾಧಿಕಾರಿ ನಾರಾಯಣ್ ಈ ವೇಳೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು