ಉಡುಪಿ: ಸ್ಥಳೀಯ ಯೋಜನೆ ಪ್ರದೇಶದ ಹೊರಭಾಗದಲ್ಲಿರುವ ಒಂದು ಎಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ ಹಾಗೂ ವಸತಿಯೇತರರಿಗೆ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ಈ ಹಿಂದಿನಂತೆ ಸಂಬಂಧಿಸಿದ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿಯೇ ಪಡೆಯಲು ಆದೇಶ ನೀಡುವಂತೆ ನಗರಾಭಿವೃದ್ಧಿ ಸಚಿವ ಬಿ. ಎಸ್. ಸುರೇಶ್ ಅವರಿಗೆ ಕರಾವಳಿ ಭಾಗದ ಶಾಸಕರು ಮನವಿ ಮಾಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಾಣದ ಪೂರ್ವದಲ್ಲಿ ಏಕ ವಿನ್ಯಾಸ ಅನುಮೋದನೆಯನ್ನು ನಗರ ಮತ್ತು ಗ್ರಾಮಾಂತರ ಇಲಾಖೆಯಿಂದ ಪಡೆದುಕೊಳ್ಳಬೇಕು ಎನ್ನುವ ಆದೇಶವಾಗಿದ್ದು ಇದರಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಶಾಸಕರು ಸಚಿವರಿಗೆ ತಿಳಿಸಿದರು.

ನಗರ ಮತ್ತು ಗ್ರಾಮಾಂತರ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಗ್ರಾಮೀಣ ಭಾಗದ ಜನರು ಜಿಲ್ಲಾ ಕೇಂದ್ರಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಕರಾವಳಿ ಭಾಗದ ಶಾಸಕರಾದ ಯಶ್ಪಾಲ್ ಸುವರ್ಣ, ವಿ. ಸುನಿಲ್ ಕುಮಾರ್, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಡಾ. ಭರತ್ ಶೆಟ್ಟಿ ವೈ., ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಸುರೇಶ್ ಶೆಟ್ಟಿ ಗುರ್ಮೆ, ಪ್ರತಾಪ್ ಸಿಂಹ ನಾಯಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.