ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಪೂರಕ ವಾತಾವರಣ’

ನೈರುತ್ಯ ಪದವೀದರ ಹಾಗೂ ಶಿಕ್ಷಕರ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಎಂ.ರಮೇಶ್ ಶೆಟ್ಟಿ
Published 29 ಮೇ 2024, 15:47 IST
Last Updated 29 ಮೇ 2024, 15:47 IST
ಅಕ್ಷರ ಗಾತ್ರ

ಉಡುಪಿ: ನೈರುತ್ಯ ಪದವೀದರರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾದ ಅಲೆ ಇದ್ದು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಜೆಡಿಎಸ್‌ ಮೈತ್ರಿ ಪಕ್ಷಗಳ ಅಭ್ಯರ್ಥಿ ಭೋಜೇಗೌಡರನ್ನು ಮತದಾರರು ತಿರಸ್ಕರಿಸಲಿದ್ದಾರೆ ಎಂದು ನೈರುತ್ಯ ಪದವೀದರ ಹಾಗೂ ಶಿಕ್ಷಕರ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಎಂ.ರಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 6 ವರ್ಷಗಳಿಂದ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಭೋಜೇಗೌಡರು ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಪರಿಣಾಮ ಶಿಕ್ಷಕ ಮತದಾರರು ಭ್ರಮನಿರಸನಗೊಂಡಿದ್ದಾರೆ. ಈ ಬಾರಿ ಆಮಿಷಗಳಿಗೆ ಒಳಗಾಗದೆ ಪ್ರಾಮಾಣಿಕ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಅವರಿಗೆ ಮತ ಹಾಕುವ ವಿಶ್ವಾಸವಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಸೋಲಿಗೆ ನಾನೇ ಕಾರಣ ಎಂದು ಕ್ಷೇತ್ರದಾದ್ಯಂತ ಪ್ರಚಾರ ಮಾಡಿದ್ದ ಭೋಜೇಗೌಡರು ಈ ಭಾರಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿರುವುದು ವಿಪರ್ಯಾಸ. ಹಿಂದೆ ಸೋಲುಂಡ ಬಿಜೆಪಿ ಅಭ್ಯರ್ಥಿಗಳು ಭೊಜೇಗೌಡರ ಸೋಲಿಗೆ ಕಾರಣರಾಗಲಿದ್ದಾರೆ ಎಂದರು.

ಪದವೀದರರ ಕ್ಷೇತ್ರದಿಂದ ಸ್ಪರ್ಧಿಸಿರುವ ಆಯನೂರು ಮಂಜುನಾಥ್ ನಾಲ್ಕು ಸದನಗಳನ್ನು ಪ್ರತಿನಿಧಿಸಿರುವ ಸಾಧನೆ ಮಾಡಿದ್ದು ಹಿಂದೆ ಪರಿಷತ್ ಸದಸ್ಯರಾಗಿದ್ದಾಗ ನೌಕರರ ವೇತನ ಬಿಡುಗಡೆ ವಿಚಾರದಲ್ಲಿ ಆಡಳಿತ ಪಕ್ಷದ ವಿರುದ್ಧವೇ ಗುಡುಗಿದ್ದರು. ಅತಿಥಿ ಉಪನ್ಯಾಸಕರ ಸಂಬಳ ಹೆಚ್ಚಳ, ಒಪಿಎಸ್‌ ಪರ ಹೋರಾಟದಲ್ಲಿ ಭಾಗವಹಿಸಿದ್ದರು. ಈ ಬಾರಿ ಅವರ ಗೆಲುವಿಗೆ ಪೂರಕವಾತಾವರಣ ಇದೆ ಎಂದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ರಾಜ್ಯದ ಬಡವರ, ಕೂಲಿ ಕಾರ್ಮಿಕರ, ಮಹಿಳೆಯರ, ನಿರುದ್ಯೋಗಿಗಳ, ಯುವಕರಿಗೆ ನೆರವಾಗಿದ್ದು ಪದವೀದರರು ಶಿಕ್ಷಕರು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಪತ್ರಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ ರಾವ್ ಕಿದಿಯೂರು, ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಾ.ಶಾಂತವೀರ ನಾಯ್ಕ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜ, ಉಡುಪಿ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ರೋಶನ್ ಶೆಟ್ಟಿ ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT