ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಮಕ್ಕಳ ರಕ್ಷಣಾ ಸಮಿತಿ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಆರೋಗ್ಯ ರಕ್ಷಣೆ, ಮಕ್ಕಳ ಹಕ್ಕುಗಳು ಮತ್ತು ವೈಯಕ್ತಿಕ ಸುರಕ್ಷತೆಯ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನಾ ನಾಯಕ್ ಮಾತನಾಡಿ, ‘ಪೋಕ್ಸೊ ಕಾಯ್ದೆ ಮತ್ತು ಕಾನೂನುಬದ್ಧವಾಗಿ ಮಕ್ಕಳಿಗೆ ದೊರೆಯುವ ಹಕ್ಕುಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದರು.

ಹಿರಿಯ ವೈದ್ಯಾಧಿಕಾರಿ ಡಾ.ಶಮಾ ಶುಕೂರ್ ಮಾತನಾಡಿ, ‘ಮೊಬೈಲ್ ಬಳಕೆಯು ಒಂದು ವ್ಯಸನವಾಗಿದೆ. ಅದರಿಂದ ಹೊರಬರಬೇಕು’ ಎಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ, ಉಪ ಪ್ರಾಚಾರ್ಯ ಪ್ರಕಾಶ್ ಭಟ್, ಸಂಸ್ಥೆಯ ಪ್ರೌಢಶಾಲಾ ಮುಖ್ಯಶಿಕ್ಷಕಿ ಜೋತ್ಸ್ನಾ, ಸ್ನೇಹಲತಾ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ, ಸಂಸ್ಥೆಯ ಮಕ್ಕಳ ರಕ್ಷಣಾ ಸಮಿತಿಯ ಬೋಧಕ ಪ್ರತಿನಿಧಿಗಳಾದ ಆಂಗ್ಲಭಾಷಾ ಉಪನ್ಯಾಸಕಿ ಶಿಜಿ ಸಿ.ಕೆ., ಪ್ರೌಢಶಾಲಾ ಸಹಶಿಕ್ಷಕಿ ಮಂಗಳಾ ಭಾಗವಹಿಸಿದ್ದರು.

ಮಕ್ಕಳ ರಕ್ಷಣಾ ಸಮಿತಿಯ ಸಂಯೋಜಕಿ, ಆಂಗ್ಲಭಾಷಾ ಉಪನ್ಯಾಸಕಿ ಪಾವನಾ ಧನ್ಯರಾಜ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.